ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ 6:10ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿರುವ ಸಿಎಂ 8:55ಕ್ಕೆ ದೆಹಲಿ ತಲುಪಲಿದ್ದಾರೆ.

ಇವತ್ತು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಲಿದ್ದಾರೆ. ಇನ್ನು ಎರಡು ದಿನಗಳ ಪ್ರವಾಸದಲ್ಲಿ ಹಲವು ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್​ ಶಾರನ್ನು ಸಿಎಂ ಭೇಟಿ ಮಾಡಲಿದ್ದಾರೆ.

The post ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ appeared first on News First Kannada.

Source: newsfirstlive.com

Source link