ಮೇಕೆದಾಟು ಯೋಜನೆ ತಡೆಯಲು ಅಣ್ಣಾಮಲೈ ಪಣ -ಆ.5ಕ್ಕೆ ಉಪವಾಸ ಸತ್ಯಾಗ್ರಹ

ಮೇಕೆದಾಟು ಯೋಜನೆ ತಡೆಯಲು ಅಣ್ಣಾಮಲೈ ಪಣ -ಆ.5ಕ್ಕೆ ಉಪವಾಸ ಸತ್ಯಾಗ್ರಹ

ಚೆನ್ನೈ: ತಮಿಳುನಾಡು ಬಿಜೆಪಿಗೆ ಅಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮೇಕೆದಾಟು ಅಣೆಕಟ್ಟು ವಿರೋಧ ವ್ಯಕ್ತಪಡಿಸಿದ್ದು, ಆಗಸ್ಟ್​ 5 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯನ್ನ ನಿಲ್ಲಿಸೋದಿಲ್ಲ, ಡ್ಯಾಂ ನಿರ್ಮಾಣ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾಮಲೈ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಅಣೆಕಟ್ಟನ್ನು ಕಟ್ಟುವುದಾಗಿ ಹೇಳಿದ್ದಾರೆ. ನಾವು ಒಂದೇ ಪಕ್ಷದಲ್ಲಿದ್ದರೂ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತೇವೆ. ಆಗಸ್ಟ್ 5 ರಂದು ಕರ್ನಾಟಕ ಸರ್ಕಾರದ ವಿರುದ್ಧ ಉಪವಾಸ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

blank

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರು ಈ ಹಿಂದೆ ಮೇಕೆದಾಟು ಯೋಜನೆ ಕುರಿತಂತೆ ತಮಿಳುನಾಡು ಸಿಎಂಗೆ ಪತ್ರ ಬರೆದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ಅಣ್ಣಾಮಲೈ, ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಬಿಜೆಪಿ, ತಮಿಳುನಾಡು ಸರ್ಕಾರದ ಜೊತೆಗೆ ನಿಲ್ಲುತ್ತದೆ. ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ನಾವು ಸಂಪೂರ್ಣ ಸ್ಪಷ್ಟವಾಗಿದ್ದೇವೆ.. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ ಎಂದು ಅಣ್ಣಾಮಲೈ ಹೇಳಿದ್ದರು.

ಇದನ್ನೂ ಓದಿ: ಮೇಕೆದಾಟು ಜಟಾಪಟಿ; ತ.ನಾಡು ಸರ್ಕಾರಕ್ಕೆ ನಮ್ಮ ಬೆಂಬಲ ಎಂದ ಅಣ್ಣಾಮಲೈ

The post ಮೇಕೆದಾಟು ಯೋಜನೆ ತಡೆಯಲು ಅಣ್ಣಾಮಲೈ ಪಣ -ಆ.5ಕ್ಕೆ ಉಪವಾಸ ಸತ್ಯಾಗ್ರಹ appeared first on News First Kannada.

Source: newsfirstlive.com

Source link