ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ದ್ವಿತೀಯ ಪಿಯುಸಿ ತರಗತಿ ಪರೀಕ್ಷೆ ಫಲಿತಾಂಶವೂ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್​​ಸೈಟ್​​ ನೋಡಬಹುದಾಗಿದೆ.

ಸಿಬಿಎಸ್​ಇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಈ ಹಿಂದೆಯೇ ಪ್ರಕಟಿಸಬೇಕಿತ್ತು. ಶಾಲೆಗಳ ಜೊತೆಗೆ ಮಂಡಳಿಯು ದತ್ತಾಂಶವನ್ನು ಒಟ್ಟು ಸೇರಿಸಲು ತಡವಾದ ಕಾರಣ ಮುಂದೂಡಲಾಗಿತ್ತು. ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಸಿಬಿಎಸ್‌ಇ ತಿಳಿಸಿತ್ತು.

ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ 12ನೇ ತರಗತಿಯ ಫಲಿತಾಂಶ ನೀಡಲಿದ್ದೇವೆ. ಯಾವುದೇ ಕಾರಣಕ್ಕೂ ಫಲಿತಾಂಶದಲ್ಲಿ ಏರುಪೇರಾಗಬಾರದು. ಈ ವರ್ಷ ಕೊರೋನಾ ಕಾರಣದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆದರೆ, ಇವರ ಭವಿಷ್ಯದ ದೃಷ್ಟಿಕೋನದಿಂದ ಯಾರಿಗೂ ತೊಂದರೆ ಆಗದಂತೆ ನ್ಯಾಯಯುತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡುತ್ತಿದ್ದೇವೆ ಎಂದು ಸಿಬಿಎಸ್​ಇ ಮಂಡಳಿ ತಿಳಿಸಿದೆ.

The post ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ appeared first on News First Kannada.

Source: newsfirstlive.com

Source link