ಮಧು ಬಂಗಾರಪ್ಪಗೆ ಕಾಂಗ್ರೆಸ್​ ಬಾವುಟ ನೀಡಿ ಸ್ವಾಗತ ಕೋರಿದ ಸುರ್ಜೇವಾಲಾ

ಮಧು ಬಂಗಾರಪ್ಪಗೆ ಕಾಂಗ್ರೆಸ್​ ಬಾವುಟ ನೀಡಿ ಸ್ವಾಗತ ಕೋರಿದ ಸುರ್ಜೇವಾಲಾ

ಹುಬ್ಬಳ್ಳಿ: ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇಂದು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್​ ಪಕ್ಷವನ್ನು ಸೇರಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಜೊತೆ ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ, ಸತೀಶ್ ಜಾರಕಿಹೊಳಿ, ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ ಹಾಗೂ ಉತ್ತರ ಕರ್ನಾಟಕದ ಹಲವು ನಾಯಕರು ಭಾಗಿಯಾಗಿದ್ದರು.

blank

ಕಾಂಗ್ರೆಸ್​ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಮಧು ಬಂಗಾರಪ್ಪ ಅವರು, ಜೆಡಿಎಸ್​ ಪಕ್ಷ ಬಿಟ್ಟ ಕಾರಣಗಳನ್ನು ನಾನು ಹೇಳುವುದಕ್ಕೂ ಮುನ್ನವೇ ಹಲವರು ಮಾತನಾಡಿದ್ದಾರೆ. ಆದರೆ ನಾನು ಸಂತೋಷದಿಂದ ಕಾಂಗ್ರೆಸ್​​ಗೆ ಸೇರ್ಪಡೆಯಾಗಿದ್ದು, ನನ್ನ ಸೇರ್ಪಡೆಯಿಂದ ಶಿವಮೊಗ್ಗದಲ್ಲಿ ಪಕ್ಷಕ್ಕೆ ಬಲ ಬರಲಿದೆ. ಬಂಗಾರಪ್ಪ ಅವರ ಹೆಸರನ್ನು ಉಳಿಸುವ ಕಾರ್ಯವನ್ನಷ್ಟೇ ಮಾಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿನ ಗುರಿ. ಯಾವತ್ತು ನಾನು ಸೊರಬ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರು ಸರಿ ಎಂದು ತಿಳಿಸಿದರು.

blank

The post ಮಧು ಬಂಗಾರಪ್ಪಗೆ ಕಾಂಗ್ರೆಸ್​ ಬಾವುಟ ನೀಡಿ ಸ್ವಾಗತ ಕೋರಿದ ಸುರ್ಜೇವಾಲಾ appeared first on News First Kannada.

Source: newsfirstlive.com

Source link