ಸ್ವಾತಂತ್ರ ದಿನಾಚರಣೆಯ ಭಾಷಣಕ್ಕೆ ಸಲಹೆ ನೀಡಿ: ಮೋದಿ

ನವದೆಹಲಿ: ಅಗಸ್ಚ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಂದ ಸಲಹೆ ನೀಡಿ ಎಂದು ಕೇಳಿದ್ದಾರೆ.

ಅಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳಿ. ನಿಮ್ಮ ಸಲಹೆಗಳು ಕೆಂಪು ಕೋಟೆಯ ಗೋಡೆಗಳ ಮೇಲಿಂದ ಇಡೀ ದೇಶಕ್ಕೇ ಪ್ರತಿಧ್ವನಿಸುತ್ತವೆ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ: ಅಭಿಷೇಕ್ ಅಂಬರೀಶ್

ಪ್ರಧಾನ ಮಂತ್ರಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ದೇಶಕ್ಕೆ ತಿಳಿಸಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿ ನಾಗರಿಕರಿಂದ ನೇರವಾಗಿ ವಿಚಾರಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸುತ್ತಿದ್ದಾರೆ. ಈ ಬಾರಿಯೂ ಕೂಡ ಅವರು ಸಾರ್ವಜನಿಕರಿಂದ ಸಲಹೆ ಕೇಳಿದ್ದಾರೆ. ನವ ಭಾರತಕ್ಕಾಗಿ ತಮ್ಮ ಕೊಡುಗೆಗಳನ್ನು ಕೊಡುಗೆಯಾಗಿ ನೀಡಲು ನಾಗರಿಕರನ್ನು ಆಹ್ವಾನಿಸಿದ್ದಾರೆ. ಆದ್ದರಿಂದ, ಈಗ ನಿಮ್ಮ ಆಲೋಚನೆಗಳನ್ನು ಹೇಳಲು, ನಿಮ್ಮ ಸಲಹೆಗಳಿಗೆ ಪದಗಳನ್ನು ನೀಡಲು ಮತ್ತು ನಿಮ್ಮ ದೃಷ್ಟಿಯನ್ನು ಜನರಿಗೆ ತಿಳಿಸಲು ನಿಮಗೆ ಅವಕಾಶವಿದೆ ಎಂದು ಪ್ರಧಾನಿ ಸಚಿವಾಲಯ ಹೇಳಿದೆ. ತಮ್ಮ ಅಭಪ್ರಾಯಗಳನ್ನು MyGov ವೆಬ್‍ಸೈಟ್‍ನಲ್ಲಿ ಹಂಚಿಕೊಳ್ಳಬಹುದಾಗಿದೆ.

The post ಸ್ವಾತಂತ್ರ ದಿನಾಚರಣೆಯ ಭಾಷಣಕ್ಕೆ ಸಲಹೆ ನೀಡಿ: ಮೋದಿ appeared first on Public TV.

Source: publictv.in

Source link