ಕೇರಳ-ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್; RTPCR ನೆಗೆಟಿವ್, 2 ಡೋಸ್ ವ್ಯಾಕ್ಸಿನ್ ಆಗಿದ್ರೆ ಮಾತ್ರ ಪ್ರವೇಶ

ಕೇರಳ-ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್; RTPCR ನೆಗೆಟಿವ್, 2 ಡೋಸ್ ವ್ಯಾಕ್ಸಿನ್ ಆಗಿದ್ರೆ ಮಾತ್ರ ಪ್ರವೇಶ

ಕೊಡಗು/ಚಾಮರಾಜನಗರ: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೊಡಗು-ಕೇರಳ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಚೆಕ್ ಪೋಸ್ಟ್ ನಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೇರಳದಲ್ಲಿ ಮತ್ತೇ ಕೊರೊನಾ ಆರ್ಭಟ ಮುಂದುವರೆದಿದ್ದು ಮುಂಜಾಗ್ರತ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಬರುವವರಿಗೆ RTPCR ನೆಗೆಟಿವ್ ಸರ್ಟಿಫಿಕೇಟ್ ಅಥವಾ ಎರಡು ಬಾರಿ ವ್ಯಾಕ್ಸಿನ್ ಆಗಿರಲೇ ಬೇಕು ಇಲ್ಲವಾದರೆ ಕೊಡಗಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೇರಳದಲ್ಲಿ ಕೊರೊನಾ ಉಲ್ಬಣದಿಂದ ಕೊಡಗಿನಲ್ಲೂ ಆತಂಕ ಶುರುವಾಗಿದೆ ಆದರೆ, ಸದ್ಯ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ನಿಯಂತ್ರಣದಲ್ಲಿದ್ದು ಮುಂಜಾಗ್ರತೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

blank

ಇನ್ನು ರಾಜ್ಯದ ಇನ್ನೊಂದು ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ಕೊರೊನಾ ಭೀತಿ ಶುರುವಾಗಿದೆ. ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ಪೋಸ್ಟ್​ನಲ್ಲಿ ಭಾರಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ. ಪ್ರಯಾಣಿಕರ RTPCR ನೆಗೆಟಿವ್ ವರದಿ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಸಿಬ್ಬಂದಿ, ಥರ್ಮಲ್​ ಸ್ಕ್ರೀನಿಂಗ್​ ಮಾಡಲಾಗುತ್ತಿದೆ. ಇನ್ನು ಹೊರ ರಾಜ್ಯದಿಂದ  ಬರುವವರಿಗೆ RTPCR ನೆಗಟಿವ್​ ವರದಿ ಅಥವಾ ಲಸಿಕೆ ಪಡೆದ ಪ್ರಮಾಣ ಪತ್ರ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಟಿಎಚ್ಓ ಡಾ.ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಕಳೆದ ಎರಡು ದಿನಗಳಿಂದ ಬೆಂಗಳೂರಲ್ಲೂ ಸೋಂಕಿತರ ಪ್ರಮಾಣ ಹೆಚ್ತಿದ್ದು, ಕೊರೊನಾಗೆ ಬ್ರೇಕ್​ ಹಾಕಲು ಪಾಲಿಕೆ ಸರ್ಕಸ್​ ಮಾಡುತ್ತಿದೆ. ಹೊರ ರಾಜ್ಯದಿಂದ ಬೆಂಗಳೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದಿಂದ ಬರುವವರಿಗೆ ಒಂದು ಡೋಸ್​ ವ್ಯಾಕ್ಸಿನ್​ ಕಡ್ಡಾಯ ಆಗಿರಲೇ ಬೇಕೆಂಬ ನಿಯಮವನ್ನು ಜಾರಿಗೆ ತಂದಿದೆ. ಜೊತೆ RTPCR  ನೆಗಟಿವ್​ ವರದಿಯೂ ಕೂಡ ಕಡ್ಡಾಯ ಎಂದು ಪಾಲಿಕೆ ಆಯುಕ್ತ ಗೌರವ ಗುಪ್ತಾ ಹೇಳಿದ್ದಾರೆ.

The post ಕೇರಳ-ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್; RTPCR ನೆಗೆಟಿವ್, 2 ಡೋಸ್ ವ್ಯಾಕ್ಸಿನ್ ಆಗಿದ್ರೆ ಮಾತ್ರ ಪ್ರವೇಶ appeared first on News First Kannada.

Source: newsfirstlive.com

Source link