ಮೃತ ಅಭಿಮಾನಿಯ ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಎಸ್​ವೈ; ಸ್ಥಳದಲ್ಲೇ 5 ಲಕ್ಷ ಆರ್ಥಿಕ ನೆರವು

ಮೃತ ಅಭಿಮಾನಿಯ ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಎಸ್​ವೈ; ಸ್ಥಳದಲ್ಲೇ 5 ಲಕ್ಷ ಆರ್ಥಿಕ ನೆರವು

ಚಾಮರಾಜನಗರ: ಬಿ. ಎಸ್. ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕಿನ ಬೊಮ್ಮಲಾಪುರದ ಅಭಿಮಾನಿ ರವಿ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ರಚನೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ, ಸಲಹೆಯನ್ನು ನೀಡಲ್ಲ -ಬಿಎಸ್​ವೈ

ಇನ್ನು ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಮಾಜಿ ಸಿಎಂ ಬಿಎಸ್​ವೈ ಆತ್ಮಹತ್ಯೆ ಮಾಡಿಕೊಂಡ ರವಿಯವರ ತಾಯಿಯನ್ನು ಭೇಟಿ ಮಾಡಿ ಅವರ ಕಾಲಿಗೆರಗಿದ್ದಾರೆ. ಕುಟುಂಬಸ್ಥರ ಜೊತೆ ಕುಳಿತು ಸಾಂತ್ವನ ಹೇಳಿದ ಯಡಿಯೂರಪ್ಪನವರು ಸ್ಥಳದಲ್ಲಿ 5 ಲಕ್ಷ ರೂಪಾಯಿ ಪರಿಹಾರ ನೀಡಿ ಇನ್ನೂ 5 ಲಕ್ಷ ರೂಪಾಯಿ ನೆರವು ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ-ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್; RTPCR ನೆಗೆಟಿವ್, 2 ಡೋಸ್ ವ್ಯಾಕ್ಸಿನ್ ಆಗಿದ್ರೆ ಮಾತ್ರ ಪ್ರವೇಶ

ನಂತರ ಮಾಧ್ಯಮದವರಿಗೆ ಎದುರಾದ ಮಾಜಿ ಸಿಎಂ ನನ್ನ ಅಭಿಮಾನಿಯ ಸಾವು ಕೇಳಿ ತುಂಬ ಬೇಜಾರಾಗಿದೆ, ಇಂತಹ ಸಂದರ್ಭದಲ್ಲಿ ಆ ಅಭಿಮಾನಿಯ ಕುಟುಂಬಕ್ಕೆ ಆಸರೆಯಾಗಬೇಕಿರುವದು ನಮ್ಮ ಕರ್ತವ್ಯ ಹೀಗಾಗಿ ಮೃತ ಅಭಿಮಾನಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿಯನ್ನು ನೀಡಿದ್ದೇನೆ, ಮತ್ತು ಮುಂದಿನ ದಿನಗಳಲ್ಲಿ 5 ಲಕ್ಷ ರೂಪಾಯಿಯನ್ನು ಬ್ಯಾಂಕ್​ ಖಾತೆಗೆ ಜಮಾ ಮಾಡಿಸುತ್ತೇನೆ ಎಂದಿದ್ದಾರೆ.

The post ಮೃತ ಅಭಿಮಾನಿಯ ಕುಟುಂಬಕ್ಕೆ ಸಾಂತ್ವನ ಹೇಳಿದ ಬಿಎಸ್​ವೈ; ಸ್ಥಳದಲ್ಲೇ 5 ಲಕ್ಷ ಆರ್ಥಿಕ ನೆರವು appeared first on News First Kannada.

Source: newsfirstlive.com

Source link