ಪಿಎಂ-ಸಿಎಂ ಭೇಟಿ; ರಾಜ್ಯಕ್ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದ ಮೋದಿ

ಪಿಎಂ-ಸಿಎಂ ಭೇಟಿ; ರಾಜ್ಯಕ್ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದ ಮೋದಿ

ನವದೆಹಲಿ: ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ನಂತರ ಮೊದಲ ಬಾರಿಗೆ ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಂಪುಟ ರಚನೆಗೂ ಮುನ್ನ ದೆಹಲಿ ನಾಯಕರನ್ನ ಭೇಟಿಯಾಗುತ್ತಿರುವ ಬಸವರಾಜ ಬೊಮ್ಮಾಯಿ ಸಂಪುಟ ರಚನೆ.. ರಾಜ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನ ಚರ್ಚಿಸಿದ್ದಾರೆ ಎನ್ನಲಾಗಿದೆ. ಮೋದಿ ಜೊತೆಗಿನ ಭೇಟಿ ಸೌಹಾರ್ದ ಭೇಟಿ ಎನ್ನಲಾಗಿದೆ. ಲೋಕ ಕಲ್ಯಾಣ್ ಮಾರ್ಗ್ ನಲ್ಲಿರೋ ಪ್ರಧಾನಿ ಮನೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದಾರೆ.

ಇನ್ನು ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ.. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿಯವರನ್ನ ಇಂದು ಭೇಟಿಯಾದೆ.. ಅವರಿಗೆ ಶುಭಾಶಯಗಳನ್ನು ತಿಳಿಸಿದೆ. ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರನ್ನ ಭೇಟಿಯಾಗಿದ್ದಾರೆ.

The post ಪಿಎಂ-ಸಿಎಂ ಭೇಟಿ; ರಾಜ್ಯಕ್ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದ ಮೋದಿ appeared first on News First Kannada.

Source: newsfirstlive.com

Source link