ಲಾಂಗ್‍ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ ಅರೆಸ್ಟ್

ಹಾವೇರಿ: ತಾಲೂಕಿನ ಹೊಸರಿತ್ತಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಯುವಕನೊಬ್ಬ ಲಾಂಗ್ ಬಳಸಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಬಳಿಕ ಈ ವೀಡಿಯೋ ವೈರಲ್ ಆಗಿತ್ತು. ಇದೀಗ ಈ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸರಿತ್ತಿ ಗ್ರಾಮದ ಸರ್ಕಾರಿ ಉರ್ದು ಶಾಲೆಯಲ್ಲಿ ಸಾಧಿಕ್ ಹವಾಲ್ದಾರ್ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಲಾಂಗ್ ಬಳಸಿ ಕೇಕ್‍ಗಳನ್ನು ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದನು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದನ್ನು ಗಮನಿಸಿ ಎಚ್ಚೆತ್ತ ಪೊಲೀಸ್ ಇಲಾಖೆ ಆರೋಪಿ ಸಾಧಿಕ್ ಹವಾಲ್ದಾರ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ವರದಾ ನದಿಯ ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡಿ ಯುವಕನ ಹುಚ್ಚಾಟ

ಈ ಸಂಬಂಧ ಸಾರ್ವಜನಿಕರು ಇಂತಹ ಘಟನೆಗಳು ಮರುಕಳಿಸದಂತೆ ಯುವಕ ಹಾಗೂ ಆತನ ಸ್ನೇಹಿತರ ಮೇಲೆ ಪೋಲಿಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

The post ಲಾಂಗ್‍ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ ಅರೆಸ್ಟ್ appeared first on Public TV.

Source: publictv.in

Source link