ಕಳೆದ ಬಾರಿಯ ನೆರೆ ಪರಿಹಾರವೇ ಬಂದಿಲ್ಲ, ಈ ಬಾರಿ ದೇವರೇ ಗತಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕಳೆದ ಬಾರಿ ಆಗಿರುವ ನೆರೆ ಪರಿಹಾರವೇ ಜನರಿಗೆ ಸಿಕ್ಕಿಲ್ಲ. ಸರ್ಕಾರದ ಆಂತರಿಕ ಕಿತ್ತಾಟದಲ್ಲಿ ಜನರು ಬಲಿಪಶುಗಳಾಗುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಹಿಳಾ ಕಾಂಗ್ರೆಸ್ ಸಮಾರಂಭದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ನೆರೆ ಹಾನಿಯ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಸಿ.ಎಲ್.ಪಿ ಟೀಮ್ ನಿಂದ ಈಗಾಗಲೇ ಎಲ್ಲೆಲ್ಲಿ ಹಾನಿಯಾಗಿದೆಯೋ ಅಲ್ಲಿ ಪರಿಹಾರ ನೀಡುವಂತೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುತ್ತದೆ ಎಂದು ಅವರು ಹೇಳಿದರು.

ಚುನಾವಣೆಗೆ ಇನ್ನೂ ಅಭ್ಯರ್ಥಿಗಳನ್ನು ನಿಶ್ಚಯ ಮಾಡಿಲ್ಲ. ಕಾಂಗ್ರೆಸ್ ಬೇರೆ, ಜೆಡಿಎಸ್ ಬೇರೆ ನಮ್ಮ ಕಾರ್ಯವೈಖರಿ ಭಿನ್ನವಾಗಿದೆ. ಬಿಜೆಪಿಯವರು ಸುಮಾರು ಎರಡು ವರ್ಷಗಳಿಂದ ಕಿತ್ತಾಟ ನಡೆಸುತ್ತಿದ್ದಾರೆ. ಅವರಿಗೆ ಅಧಿಕಾರ ಬೇಕಿದೆಯೇ ಹೊರತು ಜನರ ಯೋಗಕ್ಷೇಮ ಬೇಕಿಲ್ಲ ಎಂದರು.

The post ಕಳೆದ ಬಾರಿಯ ನೆರೆ ಪರಿಹಾರವೇ ಬಂದಿಲ್ಲ, ಈ ಬಾರಿ ದೇವರೇ ಗತಿ: ಸತೀಶ್ ಜಾರಕಿಹೊಳಿ appeared first on Public TV.

Source: publictv.in

Source link