ಜೊಲ್ಲೆ ಮೊಟ್ಟೆ ಡೀಲ್​​; ಸಚಿವ ಸ್ಥಾನಕ್ಕಾಗಿ ಪತ್ನಿ ಪರ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಲಾಬಿ

ಜೊಲ್ಲೆ ಮೊಟ್ಟೆ ಡೀಲ್​​; ಸಚಿವ ಸ್ಥಾನಕ್ಕಾಗಿ ಪತ್ನಿ ಪರ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಲಾಬಿ

ನವದೆಹಲಿ: ಬಡವರ ಹೊಟ್ಟೆ ಮೇಲೆ ಹೊಡೆದು ಹಣ ಮಾಡುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್​​ ನ್ಯೂಸ್​​ಫಸ್ಟ್​ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರ ಮಟ್ಟದಲ್ಲೂ ಜೊಲ್ಲೆ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಇದರ ನಡುವೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿ ಸಂಪುಟ ರಚನೆ ಮುಂದಾಗಿದ್ದು, ಈ ಬಾರಿ ಜೊಲ್ಲೆ ಅವರಿಗೆ ಸಚಿವ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಶಿಕಲಾ ಜೊಲ್ಲೆ ಪತಿ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಹೈಕಮಾಂಡ್​​ ಮಟ್ಟದಲ್ಲಿ ಲಾಬಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

blank

ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಕಳೆದ ಐದಾರು ದಿನಗಳಿಂದ ಶಶಿಕಲಾ ಜೊಲ್ಲೆ ದೆಹಲಿಯಲ್ಲೇ ಬಿಡು ಬಿಟ್ಟಿದ್ದಾರೆ. ಇತ್ತ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ದೆಹಲಿಯಲ್ಲಿಯೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಬೆಳಗ್ಗೆ ಸಿಎಂ ಅವರನ್ನು ಭೇಟಿ ಮಾಡಿರುವ ಅಣ್ಣಾ ಸಾಹೇಬ್ ಜೊಲ್ಲೆ, ಪತ್ನಿಯ ಪರ ಬ್ಯಾಟ್ ಬೀಸಿದ್ದಾರೆ ಎನ್ನಲಾಗಿದೆ.

ಇನ್ನು ಸಚಿವ ಸಂಪುಟ ರಚನೆ ಕುರಿತಂತೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇಂದು ಹೈಕಮಾಂಡ್​ ಜೊತೆ ಚರ್ಚೆ ಮಾಡುತ್ತೇನೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಅಲರ್ಟ್​ ಆಗಿರಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರವಾಹ ಕಡಿಮೆಯಾಗಿರುವ ಪ್ರದೇಶದಲ್ಲಿ ಪರಿಹಾರ ಕಾರ್ಯಕ್ರಮ ಆರಂಭಿಸಲು ಸೂಚನೆ ನೀಡಿದ್ದೇನೆ. ಬೆಂಗಳೂರಿಗೆ ಹೋಗುತ್ತಿದಂತೆ ಕೋವಿಡ್​​ ಹಾಗೂ ಪ್ರವಾಹದ ಬಗ್ಗೆ 2 ಸಭೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನ್ಯೂಸ್​ಫಸ್ಟ್​ ತಂಡದಿಂದ ಅತಿದೊಡ್ಡ ರಹಸ್ಯ ಕಾರ್ಯಾಚರಣೆ -ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ಬಯಲು

The post ಜೊಲ್ಲೆ ಮೊಟ್ಟೆ ಡೀಲ್​​; ಸಚಿವ ಸ್ಥಾನಕ್ಕಾಗಿ ಪತ್ನಿ ಪರ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಲಾಬಿ appeared first on News First Kannada.

Source: newsfirstlive.com

Source link