ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾ ಪಡೆ

ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾ ಪಡೆ

ಶ್ರೀನಗರ: ಪುಲ್ವಾಮ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಜಮ್ಮು-ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ನಡೆಸಿದ ಎನ್ಕೌಂಟರ್ನಲ್ಲಿ ಅಬು ಸೈಫುಲ್ಲಾ ಮತ್ತು ಲಂಬೂ ಎಂಬ ಇಬ್ಬರು ಉಗ್ರರು ಹತರಾಗಿದ್ದಾರೆ.

ಶನಿವಾರ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಭದ್ರತಾ ಪಡೆಗಳು ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶದಲ್ಲಿ ಶೋಧಕಾರ್ಯ ಆರಂಭಿಸಿದರು. ಭದ್ರತಾ ಪಡೆಯ ಈ ಶೋಧ ಕಾರ್ಯಾಚರಣೆಯಲ್ಲಿ ಉಗ್ರರು ಸಿಕ್ಕಿಬಿದ್ದಿದ್ದಾರೆ.

ಇನ್ನು, ಸಿಕ್ಕಿಬಿದ್ದ ಇಬ್ಬರು ಉಗ್ರರ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಹತರಾದ ಉಗ್ರರು ಜೈಷ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.

The post ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾ ಪಡೆ appeared first on News First Kannada.

Source: newsfirstlive.com

Source link