ಬೊಮ್ಮಾಯಿ ಸಂಪುಟದಲ್ಲಿ ಇರಲ್ವಾ ಜಗದೀಶ್ ಶೆಟ್ಟರ್​..? ಪ್ರಹ್ಲಾದ್​​ ಜೋಶಿ ಹೇಳಿದ್ದೇನು..?

ಬೊಮ್ಮಾಯಿ ಸಂಪುಟದಲ್ಲಿ ಇರಲ್ವಾ ಜಗದೀಶ್ ಶೆಟ್ಟರ್​..? ಪ್ರಹ್ಲಾದ್​​ ಜೋಶಿ ಹೇಳಿದ್ದೇನು..?

ನವದೆಹಲಿ: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ 600 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದರು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಪ್ರಹ್ಲಾದ್​​ ಜೋಶಿ ಅವರು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೆರೆ ಪರಿಹಾರ 600 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.

ಎರಡು ಮೂರು ದಿನದಲ್ಲಿ ಸಚಿವ ಸಂಪುಟ ಪಟ್ಟಿ ಫೈನಲ್ ಆಗಲಿದೆ. ವರಿಷ್ಟರ ಜೊತೆ ಸಿಎಂ ಬೊಮ್ಮಾಯಿ ಈಗಾಗಲೇ ಚರ್ಚೆ ನಡೆಸಿದ್ದಾರೆ. ಜಗದೀಶ್ ಶೆಟ್ಟರ್ ಈ ಹಿಂದೆ ಮುಖ್ಯಮಂತ್ರಿ ಆಗಿದ್ದರು. ಯಡಿಯೂರಪ್ಪ ಹಿರಿಯರು ಎಂದು ಸಂಪುಟದಲ್ಲಿದ್ದೆ ಅಷ್ಟೇ ಎಂದು ಹೇಳಿದ್ದಾರೆ. ಈಗ ನನಗೆ ವಯಸ್ಸಾಗಿದೆ, ಹೀಗಾಗಿ ಸಂಪುಟದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದರು.

Source: newsfirstlive.com Source link