ಕೇರಳದಲ್ಲಿ ಕೊರೊನಾ ಹೆಚ್ಚಳ; ಮಂಗಳೂರು-ಕಾಸರಗೋಡು ಸಂಚಾರ ಸ್ಥಗಿತ

ಕೇರಳದಲ್ಲಿ ಕೊರೊನಾ ಹೆಚ್ಚಳ; ಮಂಗಳೂರು-ಕಾಸರಗೋಡು ಸಂಚಾರ ಸ್ಥಗಿತ

ಮಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆ ಮಂಗಳೂರು-ಕಾಸರಗೋಡು ನಡುವೆ ಸಂಚರಿಸುವ ಸರಕಾರಿ ಹಾಗೂ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ನಾಳೆಯಿಂದ 1 ವಾರಗಳ ಕಾಲ ಬಸ್ ಸಂಚಾರ ಸ್ಥಗಿತ ಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಡಾಳಿತ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಿಲ್ಲಾಡಳಿತದ ಕ್ರಮಗಳು ಏನೇನು.?

  • ಇನ್ನು ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಾಳಿತ ಆದೇಶ ನೀಡಿದ್ದು ಕೇರಳದಿಂದ ಬರುವ ಪ್ರತಿ ವಾಹನ ತಪಾಸಣೆಗೆ ಆದೇಶ ನೀಡಿದ್ದಾರೆ.
  • ಜಿಲ್ಲಾ ಪ್ರವೇಶಕ್ಕೆ ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.
  • 2 ಡೋಸ್ ಲಸಿಕೆ ಆಗಿದ್ದರೂ ಆರ್ ಟಿ ಪಿ ಸಿ ಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.
  • ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಆಗಸ್ಟ್ 10 ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ.

Source: newsfirstlive.com Source link