ಡಿಕೆಶಿ ನನ್ನ ಜೇಬಿನಲ್ಲಿದ್ದಾರೆ ಅನ್ನುತ್ತಾ ತಿರುಗಾಡ್ತಿರೋ ಹೆಬ್ಬಾಳ್ಕರ್ ಅಳಿಯನ ವಿರುದ್ಧ ಕ್ರಮಕ್ಕೆ ಆಗ್ರಹ

– ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡ ವೀಡಿಯೋ ವೈರಲ್

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನನ್ನ ಜೇಬಿನಲ್ಲಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ಹೇಳುತ್ತಾ ತಿರುಗಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡ ಅವರ ವೀಡಿಯೋ ಇದೀಗ ವೈರಲ್ ಆಗಿದೆ.

ಶುಕ್ರವಾರ ಹುಬ್ಬಳ್ಳಿಯಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಮುಖಂಡರ ಜೊತೆ ಸಮಾಲೋಚನೆ ನಡೆಯುವ ವೇಳೆ ಗಿರೀಶ್ ಹೇಳಿದ್ದಾರೆ. ಅಲ್ಲದೆ ಈ ಕುರಿತು ನೇರ ಡಿಕೆಶಿಗೆ ದೂರು ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೆವಾಲ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೆಲಕಾಲ ಬಿಸಿ ಬಿಸಿ ಚರ್ಚೆ ನಡೆಯಿತು. ಶಾಸಕಿ  ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ಡಿ.ಕೆ ಶಿವಕುಮಾರ್ ನನ್ನ ಜೇಬಿನಲ್ಲಿದ್ದಾರೆ ಅಂತಾ ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸಚಿವ ಸಂಪುಟದಿಂದ ಗೇಟ್ ಪಾಸ್- ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ರಾಜಕೀಯಕ್ಕೆ ಗುಡ್ ಬೈ

ಸಭೆಯಲ್ಲಿ ಹೇಳಿರುವ ಈ ವೀಡಿಯೋ ಇದೀಗ ವೈರಲ್ ಆಗಿದೆ. ಸಭೆಯಲ್ಲಿ ನಡೆದ ಪರಿಣಾಮ ಜಿಲ್ಲಾಧ್ಯಕ್ಷರಿಗೆ ಘಟನೆಯ ಬಗ್ಗೆ ವರದಿ ನೀಡುವಂತೆ ಡಿಕೆಶಿ ಸೂಚನೆ ನೀಡಿದ್ದಾರೆ. ಅಲ್ಲದೇ ಸಭೆಯಲ್ಲಿ ಅನಗತ್ಯವಾಗಿ ಗಲಾಟೆ ಮಾಡಿದ ಗಿರೀಶ್ ಗದಿಗೆಪ್ಪಗೌಡರನ್ನ ಸಭೆಯಿಂದ ಹೊರಹಾಕಿ ಸಭೆ ಮುಂದುವರಿಸಲಾಗಿದೆ.

Source: publictv.in Source link