ಕೊರೊನಾ 3ನೇ ಅಲೆ ಆತಂಕ; ನಾಳೆಯಿಂದ ಅಂಜನಾದ್ರಿ ಬೆಟ್ಟಕ್ಕೆ ನೋ ಎಂಟ್ರಿ

ಕೊರೊನಾ 3ನೇ ಅಲೆ ಆತಂಕ; ನಾಳೆಯಿಂದ ಅಂಜನಾದ್ರಿ ಬೆಟ್ಟಕ್ಕೆ ನೋ ಎಂಟ್ರಿ

ಕೊಪ್ಪಳ: ನೆರೆ ರಾಜ್ಯಗಳಲ್ಲಿ ಕೊರೊನಾ 3ನೇ ಅಲೆ ಆರಂಭ ಹಿನ್ನೆಲೆ ರಾಜ್ಯದ ಪೌರಾಣಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಅಂಜನಾದ್ರಿ ಬೆಟ್ಟಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೊರೊನಾತಂಕ ವ್ಯಕ್ತಪಡಿಸಿದ ಕೊಪ್ಪಳ ಉಪ ವಿಭಾಗಾಧಿಕಾರಿ‌ ನಾರಾಯಣ ರೆಡ್ಡಿ ಕನಕ ರೆಡ್ಡಿ ನಾಳೆಯಿಂದ ಅಂಜನಾದ್ರಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ.

ಇನ್ನು ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಕೂಡ 2 ಕಿ.ಮೀ ವ್ಯಾಪ್ತಿವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದು, ಉತ್ತರ ಭಾರತದ‌ ವಿವಿಧ ರಾಜ್ಯದ ಸಾವಿರಾರು ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ಹಿನ್ನೆಲೆ ಪ್ರವೇಶ ನಿಷೇಧ ಮಾಡಲಾಗಿದೆ ಎಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

Source: newsfirstlive.com Source link