’ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ’ -ಎಂ.ಪಿ.ರೇಣುಕಾಚಾರ್ಯ

’ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ’ -ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ನನಗೆ ಸಚಿವ ಸ್ಥಾನ ನೀಡಿದ್ರೆ, ನಾನು ಸಚಿವ ಸ್ಥಾನವನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಸ್ಥಾನದ ಆಸೆಯನ್ನು ಹೊರಹಾಕಿದ್ದಾರೆ.

ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿದೆ ಮಾತನಾಡಿದ ಅವರು.. ನಾನು ನೇರಾ ನೇರ ರಾಜಕೀಯ ಮಾಡುವವನು, ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನಾನಲ್ಲ, ನನಗೆ ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ ಎಂದಿದ್ದಾರೆ.

ನೂತನ ಸಂಪುಟದಲ್ಲಿ ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಅವರು , ಈ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ್ಮೆಂದ್ರ ಪ್ರದಾನ್, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಪ್ರಾದೇಶಿಕ ಸಮತೋಲನ ಆಧಾರದ ಮೇಲೆ ಜಿಲ್ಲೆಗೆ ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇವೆ. ಸಚಿವ ಸ್ಥಾನ ನೀಡಿದರೆ ಅದನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

Source: newsfirstlive.com Source link