ಮೊಬೈಲ್​ ಚಾರ್ಜ್​ ಸಲುವಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಮೊಬೈಲ್​ ಚಾರ್ಜ್​ ಸಲುವಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಬೆಂಗಳೂರು: ಮೊಬೈಲ್​ ಚಾರ್ಜ್ ಹಾಕುವ ಸಲುವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ರಾಜಾಜಿನಗರದಲ್ಲಿ ನಡೆದಿದೆ.

ಸುನಿಲ್​ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ರಾಜಾಜಿನಗರದಲ್ಲಿ ನೆಲೆಸಿದ್ದ ಮಧ್ಯ ಪ್ರದೇಶ ಮೂಲದ ಇಬ್ಬರು ವ್ಯಕ್ತಿಗಳು ಕೆಲಸ ಮುಗಿಸಿಕೊಂಡು ಮನೆಗೆ ಬಂದ ವೇಳೆ ಮೊಬೈಲ್ ಚಾರ್ಜ್ ಹಾಕೋ ವಿಚಾರದಲ್ಲಿ ಜಗಳ ಶುರುವಾಗಿದೆ.

ಒಂದೇ ಸ್ವಿಚ್​ ಇದ್ದು ಮೊಬೈಲ್​ ಚಾರ್ಜ್​ ಹಾಕಲು ನಾ ಮುಂದು, ತಾ ಮುಂದು ಎನ್ನುತ್ತಾ ಕುಡಿದ ಮತ್ತಿನಲ್ಲಿದ್ದ ಇಬ್ಬರ ನಡುವೆ ಸಣ್ಣದಾಗಿ ಜಗಳ ಶುರುವಾಗಿದೆ ಎನ್ನಲಾಗಿದ್ದು, ನಂತರ ಜಗಳ ತಾರಕ್ಕಕ್ಕೇರಿದ್ದು, ಇಬ್ಬರ ನಡುವೆ ತಳ್ಳಾಟ ನಡೆದ ಪರಿಣಾಮ ಪಕ್ಕದಲ್ಲಿದ್ದ ಸೌದೆಯಿಂದ ಆರೋಪಿ ಮೃತನ ತಲೆಗೆ ಬಾರಿಸಿದ್ದಾನೆ ಎನ್ನಲಾಗಿದೆ.

ತಲೆಗೆ ಬಿದ್ದ ಏಟಿನಿಂದ ತೀವ್ರ ಗಾಯಗೊಂಡಿದ್ದ ಮೃತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸಿದ್ದಾರೆಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

Source: newsfirstlive.com Source link