ಅರ್ಬಿ ಫಾಲ್ಸ್​ಗೆ ತೆರಳಿದ್ದ ವಿದ್ಯಾರ್ಥಿನಿ ನೀರುಪಾಲು

ಅರ್ಬಿ ಫಾಲ್ಸ್​ಗೆ ತೆರಳಿದ್ದ ವಿದ್ಯಾರ್ಥಿನಿ ನೀರುಪಾಲು

ಉಡುಪಿ: ಸ್ನೇಹಿತರ ಜೊತೆಗೂಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ತೆರಳಿದ್ದ ವಿದ್ಯಾರ್ಥಿಯೊರ್ವಳು ನೀರಿನಲ್ಲಿ ಮುಳುಗಿ ಸಾವನ್ನಪಿದ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ.

ವರ್ಷಿತಾ ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿನಿ. ಕಾರ್ಕಳದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಯೊಟೆಕ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿನಿ, ಅರ್ಬಿ ಫಾಲ್ಸ್ ವೀಕ್ಷಣೆಗೆಂದು ಸಹಪಾಟಠಿಗಳ ಜೊತೆ ತೆರಳಿದ್ದ ವೇಳೆಯಲ್ಲಿ ಈಜಲೆಂದು ನೀರಿಗೆ ಇಳಿದಾಗ ನೀರಿನ ಸುಳಿಗೆ ಸಿಕ್ಕು ದುರ್ಘಟನೆ ನಡೆದಿದೆ ಎನ್ನಲಾಗಿದೆ.

blank

ಮಾಹಿತಿ ಆಧರಿಸಿ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಮೃತ ದೇಹವನ್ನು ನೀರಿನಿಂದ ಮೇಲಕ್ಕೆ ತರಲಾಗಿದ್ದು ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source: newsfirstlive.com Source link