ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣವಚನ- ಯಾರಿಗೆ ಮಂತ್ರಿಗಿರಿ?

ಬೆಂಗಳೂರು: ಅಂತೂ ಇಂತೂ ಸಂಪುಟ ಯೋಗ ಕೂಡಿ ಬಂದಿದ್ದು, ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮುಖ್ಯಕಾರ್ಯದರ್ಶಿಯಿಂದ ಶಿಷ್ಟಾಚಾರ ವಿಭಾಗಕ್ಕೆ ಸಹ ಸಿದ್ಧತೆಗೆ ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರ ರಾಜಭವನಕ್ಕೂ ಮಾಹಿತಿ ತಿಳಿಸಿದ್ದು, ಮಧ್ಯಾಹ್ನ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಬೆಳಗ್ಗೆ 6:10ಕ್ಕೆ ಸಿಎಂ ಬೊಮ್ಮಾಯಿ ದೆಹಲಿಯಿಂದ ಬೆಂಗಳೂರಿಗೆ ಹೊರಡಲಿದ್ದಾರೆ.

ಮಂತ್ರಿಸ್ಥಾನ ಯಾರಿಗೆ?
ಬಿ.ಸಿ.ಪಾಟೀಲ್, ಬೈರತಿ ಬಸವರಾಜು, ಎಸ್. ಟಿ.ಸೋಮಶೇಖರ್, ಸುಧಾಕರ್, ಪೂರ್ಣಿಮಾ ಶ್ರೀನಿವಾಸ್, ಈಶ್ವರಪ್ಪ, ಅಶೋಕ್, ಶ್ರೀರಾಮುಲು, ಅಶ್ವಥ್ ನಾರಾಯಣ್, ಅರವಿಂದ ಲಿಂಬಾವಳಿ  ಅವರಿಗೆ ಮಂತ್ರಿಸ್ಥಾನ ಸಿಗುವುದು ಖಚಿತವಾಗಿದೆ.

Source: publictv.in Source link