ಮಂಗಳೂರು ವಿವಿ ಪದವಿ ಎಲ್ಲಾ ಪರೀಕ್ಷೆಗಳು ರದ್ದು

ಮಂಗಳೂರು: ಕೇರಳದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳು ಮುಂದಿನ ಆದೇಶದವರೆಗೆ ರದ್ದಾಗಿದೆ.

ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ವಿವಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ಹಿನ್ನೆಲೆಯಲ್ಲಿ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ ಪಿ.ಎಲ್.ಧರ್ಮ ರದ್ದುಗೊಳಿಸಿ ಆದೇಶ ಪ್ರಕಟಿಸಿದ್ದಾರೆ.

ನಿನ್ನೆಯಿಂದ ಮಂಗಳೂರು ವಿವಿಯ ಪದವಿ ಪರೀಕ್ಷೆಗಳು ಆರಂಭಗೊಂಡಿತ್ತು. ಕಾಸರಗೋಡು ಭಾಗದಿಂದ ಸಾವಿರಾರು ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪರೀಕ್ಷೆಗೆ ಹಾಜರಾಗುತ್ತಿದ್ದ ಕಾರಣ ರದ್ದು ನಿರ್ಧಾರವನ್ನು ಕೈಗೊಳ್ಳಲಾಗಿದೆ.  ಇದನ್ನೂ ಓದಿ : ದಕ್ಷಿಣ ಕನ್ನಡ, ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳು ಕ್ಲೋಸ್

ಕಾಸರಗೋಡಿನಲ್ಲಿ ಕೋವಿಡ್ ಪ್ರಕರಣ ಏರಿಕೆ ಹಿನ್ನೆಲೆ ದ.ಕ ಜಿಲ್ಲಾಡಳಿತದ ನಿರ್ಧಾರ ಕೈಗೊಂಡಿದ್ದು, ಮುಂದಿನ ಅದೇಶದವರೆಗೆ ಪರೀಕ್ಷೆ ರದ್ದುಗೊಳಿಸಿ ತರಗತಿಗಳನ್ನೂ ಮುಂದೂಡುವಂತೆ ಸೂಚಿಸಿಲಾಗಿದೆ.

Source: publictv.in Source link