ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ಮಹಿಳೆಯನ್ನ ರಕ್ಷಿಸಿದ ಯುವಕರು

ಚಿಕ್ಕಮಗಳೂರು: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನ ಸ್ಥಳೀಯ ಯುವಕರು ರಕ್ಷಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಶೈಲಾ ಎಂಬವರು ಹೇಮಾವತಿ ನದಿ ತಟದಲ್ಲಿ ಕೂತಿದ್ದವರು ಆಯ ತಪ್ಪಿ ಬಿದ್ದು ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದರು. ಇದರ ಗಮನಿಸಿದ ಸ್ಥಳೀಯ ಯುವಕರು ನೀರಿಗೆ ಹಾರಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನ ರಕ್ಷಿಸಿದ್ದಾರೆ. ಮಹಿಳೆ ಶೈಲಾ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದುದ್ದನ್ನ ಫಲ್ಗುಣಿ ಗ್ರಾಮದ ಲೋಹಿತ್ ಕಂಡು ನೋಡಿ ಅಲ್ಲೇ ಇದ್ದ ಹುಡುಗರನ್ನ ಕರೆದು ಎಲ್ಲರೂ ನೀರಿಗೆ ಇಳಿದು ಮಹಿಳೆಯನ್ನ ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಆ ಬಳಿಕ ನೀರಿನಲ್ಲಿ ಕೊಚ್ಚಿ ಹೋಗುವ ವೇಳೆ ನೀರು ಕುಡಿದು ಅಸ್ವಸ್ಥರಾಗಿದ್ದ ಮಹಿಳೆಗೆ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದಾರೆ.

ಮಲೆನಾಡಿನ ಘಟ್ಟ ಪ್ರದೇಶದಲ್ಲಿ ಸಾಧಾರಣ ಮಳೆ ಇದೆ. ನದಿಗಳು-ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗುವಾಗ ಸೂಕ್ತ ಸಂದರ್ಭದಲ್ಲಿ ನೀರಿಗೆ ಧುಮುಕಿ ಮಹಿಳೆಯ ಜೀವ ಉಳಿಸಿದ ಶೌರ್ಯ ವಿಪತ್ತು ನಿರ್ವಹಣ ತಂಡದ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎನ್.ಆರ್.ಪುರ-ಬೃಹತ್ ಮರ ಕಡಿದು, ಹಗ್ಗ ಕಟ್ಟಿಕೊಂಡು ಮರದ ಮೇಲೆಯೇ 9 ಜನರ ರಕ್ಷಿಸಿದ ಪಿಎಸ್‍ಐ

Source: publictv.in Source link