ಕ್ಯಾಬಿನೆಟ್ ಸೇರ್ಪಡೆ ಖಚಿತ ಪಡಿಸಿದ ಮುರುಗೇಶ್ ನಿರಾಣಿ, ಬಿ.ಸಿ.ಪಾಟೀಲ್

ಕ್ಯಾಬಿನೆಟ್ ಸೇರ್ಪಡೆ ಖಚಿತ ಪಡಿಸಿದ ಮುರುಗೇಶ್ ನಿರಾಣಿ, ಬಿ.ಸಿ.ಪಾಟೀಲ್

ಬಾಗಲಕೋಟೆ/ಬೆಂಗಳೂರು: ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತವಾಗಿದೆ.

ಈ ಕುರಿತು ನ್ಯೂಸ್​​ಫಸ್ಟ್​​ಗೆ ಸ್ಪಷ್ಟಪಡಿಸಿರುವ ಮುರುಗೇಶ್ ನಿರಾಣಿ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಕರೆ ಬಂದಿದೆ. ಬೆಂಗಳೂರಿನಲ್ಲಿಯೇ ಇರುವಂತೆ ಸೂಚಿಸಿದ್ದಾರೆ. ಸದ್ಯ ನಾನು ಈಗ ಬೆಂಗಳೂರಿನಲ್ಲಿಯೇ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

blank

ಇತ್ತ ಸಂಪುಟ ಸೇರ್ಪಡೆ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಬಿ.ಸಿ ಪಾಟೀಲ್​ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಾಳೆ ಮಧ್ಯಾಹ್ನ 2.15 ಕ್ಕೆ ಸಚಿವನಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಎಂದಿನಂತೆ ನಿಮ್ಮ ಸಹಕಾರ ಕ್ಷೇತ್ರದ ಜನತೆಯ ಆಶೀರ್ವಾದವಿರಲಿ ಎಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜನತೆಗೆ ಸಹಕಾರ ಕೋರಿದ್ದಾರೆ.

Source: newsfirstlive.com Source link