ಜಿಲ್ಲೆಯಲ್ಲಿ 15 ದಿನದ ಹಿಂದೆ ಧಾರಾಕಾರ ಮಳೆ – ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ಕುಸಿಯುತ್ತಿರುವ ಧರೆ

ಶಿವಮೊಗ್ಗ : ಕಳೆದ ಹದಿನೈದು ದಿನದ ಹಿಂದೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದು ಅವಾಂತರವೇ ಸೃಷ್ಟಿಯಾಗಿತ್ತು. ಆದರೆ ಇದೀಗ ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ಸಮೀಪದ ಕುಂಬಾರದೂಡುಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಧರೆ ಕುಸಿಯುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ದೃಶ್ಯ ಗಮನಿಸಿದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಕುರುವಳ್ಳಿ ಸಮೀಪದ ಕುಂಬಾರದೂಡುಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಈ ಗಣಿಗಾರಿಕೆಯ ಮೇಲೆಯೇ ಧರೆ ಕುಸಿದು ಬಿದ್ದಿದೆ. ಧರೆ ಕುಸಿಯುವ ವೇಳೆ ಮಳೆ ಬರುತ್ತಿದ್ದರಿಂದ ಕಲ್ಲು ಕ್ವಾರೆಯಲ್ಲಿ ಕಾರ್ಮಿಕರು ಇರಲಿಲ್ಲ. ಹಾಗಾಗಿ ಅಪಾಯ ಸಂಭವಿಸಿಲ್ಲ.

ಧರೆ ಕುಸಿದಿರುವ ಸ್ಥಳ ರಾಷ್ಟ್ರೀಯ ಹೆದ್ದಾರಿ 169 ಕ್ಕೆ ಹೊಂದಿಕೊಂಡಂತಿದ್ದು, ಈ ರಸ್ತೆಯಲ್ಲಿ ಶಿವಮೊಗ್ಗ – ಮಂಗಳೂರಿಗೆ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಜೊತೆಗೆ ಈ ಕ್ವಾರೆಯ ಪಕ್ಕದಲ್ಲೇ ಕುಂಬಾರದೂಡುಗೆ ಗ್ರಾಮವಿದೆ. ಈ ಗ್ರಾಮದಲ್ಲಿ ನೂರಾರು ಮನೆಗಳು ಇವೆ. ಅಧಿಕಾರಿಗಳು ಗುಡ್ಡ ಕುಸಿಯುತ್ತಿರುವ ಸ್ಥಳ ಪರಿಶೀಲಿಸಿ, ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಧಾರಾಕಾರ ಮಳೆ- ಶಿವಮೊಗ್ಗ, ತೀರ್ಥಹಳ್ಳಿ ಹೆದ್ದಾರಿ ಕುಸಿತ, ಪರ್ಯಾಯ ಮಾರ್ಗ

Source: publictv.in Source link