ಕೊರೊನಾ ಆತಂಕ; ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಕೊರೊನಾ ಆತಂಕ; ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಕೇರಳದಿಂದ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ, ಎಲ್ಲಾ ಪದವಿ ಪರೀಕ್ಷೆಗಳನ್ನ ಅನಿರ್ಧಿಷ್ಟಾವಧಿ ವರೆಗೆ ಮುಂದೂಡಿ ಮಂಗಳೂರು ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.

blank

ಜಿಲ್ಲಾಧಿಕಾರಿ ಸೂಚನೆ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನ ಮುಂದೂಡಲಾಗಿದ್ದು, ಮುಂದಿನ ಆದೇಶದವರೆಗೆ ವಿವಿಯ ಪರೀಕ್ಷೆಗಳು ಸ್ಥಗಿತವಾಗಲಿವೆ. ಕೇರಳದ ಕಾಸರಗೋಡು ಭಾಗದ ನೂರಾರು ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪರೀಕ್ಷೆಗೆ ಹಾಜರಾಗುವುದರಿಂದ ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಗಳನ್ನ ಮುಂದೂಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪದವಿ ಕೋರ್ಸ್​​​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್..
2021-22ನೇ ಸಾಲಿನ ಪದವಿ ಕೋರ್ಸ್​​​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ‌ಮುಂದೂಡಿಕೆಯಾಗಿದ್ದು, ಇಂದಿನಿಂದಲೇ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು. ಆದರೇ ಪ್ರವೇಶ ಪ್ರಕ್ರಿಯೆ ದಿನಾಂಕ ಮುಂದೂಡಿಕೆಯಾಗಿದ್ದು, ಸದ್ಯದಲ್ಲೇ ಪ್ರಕಟ ಮಾಡಲಾಗುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Source: newsfirstlive.com Source link