ನೂತನ ಸಚಿವರ ಪಟ್ಟಿ ರಿಲೀಸ್- ಭಾವುಕರಾದ ಸುರೇಶ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವ ಸರ್ಕಾರದ ನೂತನ ಸಚಿವರ ಪಟ್ಟಿ ರಿಲೀಸ್ ಆಗಿದೆ. ಈ ಬೆನ್ನಲ್ಲೇ ಮಾಜಿ ಸಚಿವ ಸುರೇಶ್ ಕುಮಾರ್ ಭಾವುಕರಾಗಿ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಮಾಜಿ ಸಚಿವರು, ‘ಕಳೆದ 2 ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಇದೀಗ ಬೊಮ್ಮಾಯಿ ಸರ್ಕಾರದ ಸಚಿವರ ಪಟ್ಟಿಯಲ್ಲಿ ಸುರೇಶ್ ಕುಮಾರ್ ಹೆಸರು ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಭಾವುಕರಾಗಿದ್ದಾರೆ.

ಸುರೇಶ್ ಕುಮಾರ್ ಜೊತೆ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ.ಪಿ ಯೋಗೇಶ್ವರ್, ಆರ್ ಶಂಕರ್ ಹಾಗೂ ಶ್ರೀಮಂತ ಪಾಟೀಲ್ ಇವರುಗಳ ಹೆಸರನ್ನೂ ಕೂಡ ಕೈ ಬಿಡಲಾಗಿದೆ.

ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ:
ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬೀಳಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣಗೌಡ – ಕೆಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ, ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದ ರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು.

Source: publictv.in Source link