ಸಚಿವ ಸ್ಥಾನ ಕಳೆದುಕೊಂಡ ಬೆನ್ನಲ್ಲೇ, ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಸುರೇಶ್ ಕುಮಾರ್

ಸಚಿವ ಸ್ಥಾನ ಕಳೆದುಕೊಂಡ ಬೆನ್ನಲ್ಲೇ, ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಸುರೇಶ್ ಕುಮಾರ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕೈ ಬಿಡಲಾಗಿದ್ದು, ಈ ಹಿನ್ನೆಲೆಯಲ್ಲಿ ಫೇಸ್​​ಬುಕ್​​​ನಲ್ಲಿ ಪೋಸ್ಟ್​ ಮಾಡಿರುವ ಸುರೇಶ್ ಕುಮಾರ್ ಅವರು, ರಾಜ್ಯದ ಜನತೆಗೆ ಧನ್ಯವಾದ ಅರ್ಪಣೆ ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಇನ್ನು 29 ಶಾಸಕರು ಸಂಪುಟ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಇದರಲ್ಲಿ 7 ಒಬಿಸಿ, 7 ಒಕ್ಕಲಿಗ, 3 ದಲಿತ, ಎಸ್​​ಟಿ ಮತ್ತು ರೆಡ್ಡಿ ತಲಾ 1, 8 ಲಿಂಗಾಯತ ಸಮುದಾಯ ಹಾಗೂ ಒಂದು ಮಹಿಳಾ ಸ್ಥಾನಕ್ಕೆ ಅವಕಾಶ ನೀಡಲಾಗಿದೆ. ಸಚಿವರ ಅಧಿಕೃತ ಪಟ್ಟಿ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆಯಾಗಬೇಕಿದೆ.

Source: newsfirstlive.com Source link