ಸಂಪುಟದಲ್ಲಿ ವಲಸಿಗರಿಗೆ ಮಣೆ – ರಾಮದಾಸ್ ಟಾಂಗ್

ಮೈಸೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವ ಸರ್ಕಾರದ ನೂತನ ಸಚಿವರ ಪಟ್ಟಿ ರಿಲೀಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಎಸ್.ಎ. ರಾಮದಾಸ್ ಟಾಂಗ್ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂ.1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

ಇತ್ತ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಕೂಡ ಟ್ವೀಟ್ ಮಾಡುವ ಮೂಲಕ ಭಾವುಕರಾಗಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಮಾಜಿ ಸಚಿವರು, ‘ಕಳೆದ 2 ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಬೊಮ್ಮಾಯಿ ಸಂಪುಟ ಸೇರಲಿರುವ ಶಾಸಕರ ಪಟ್ಟಿ ರಿಲೀಸ್ – ಮಧ್ಯಾಹ್ನ 2.15ಕ್ಕೆ 29 ಮಂದಿ ಪ್ರಮಾಣ ವಚನ

ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಇದೀಗ ಬೊಮ್ಮಾಯಿ ಸರ್ಕಾರದ ಸಚಿವರ ಪಟ್ಟಿಯಲ್ಲಿ ಸುರೇಶ್ ಕುಮಾರ್ ಹೆಸರು ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಭಾವುಕರಾಗಿದ್ದಾರೆ. ಸುರೇಶ್ ಕುಮಾರ್ ಜೊತೆ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ.ಪಿ ಯೋಗೇಶ್ವರ್, ಆರ್ ಶಂಕರ್ ಹಾಗೂ ಶ್ರೀಮಂತ ಪಾಟೀಲ್ ಇವರುಗಳ ಹೆಸರನ್ನೂ ಕೂಡ ಕೈ ಬಿಡಲಾಗಿದೆ.

Source: publictv.in Source link