ಕೈ ತಪ್ಪಿದ ಸಚಿವ ಸ್ಥಾನ.. ಬಿಎಸ್​​ವೈ ಎದುರು ಗದ್ಗದಿತರಾಗಿ ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ!

ಕೈ ತಪ್ಪಿದ ಸಚಿವ ಸ್ಥಾನ.. ಬಿಎಸ್​​ವೈ ಎದುರು ಗದ್ಗದಿತರಾಗಿ ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ!

ಬೆಂಗಳೂರು: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರು ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಇದೇ ವೇಳೆ ಒಂದು ಕ್ಷಣ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

ಸಂಪುಟ ಸ್ಥಾನ ಕೈತಪ್ಪಿರುವ ಮಾಹಿತಿ ಲಭ್ಯವಾಗುತ್ತಿದಂತೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ರೇಣುಕಾಚಾರ್ಯ ಅವರು, ಎರಡು ಗಂಟೆಗೂ ಹೆಚ್ಚು ಹೊತ್ತು ಬಿಎಸ್​​ವೈ ಅವರೊಂದಿಗೆ ಮಾತುಕತೆ ನಡೆಸಿದರು. ಮಾತುಕತೆ ವೇಳೆ ಭಾವುಕರಾಗಿದ್ದ ರೇಣುಕಾಚಾರ್ಯ ಅವರು ಒಂದು ಹಂತದಲ್ಲಿ ಗದ್ಗದಿತರಾಗಿ ಕಣ್ಣೀರಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

blank

ನಾನು ಪಕ್ಷದ ನಿಷ್ಠಾವಂತನಾಗಿ ಕೆಲಸ ಮಾಡಿದ್ದೇನೆ. ಆದರೂ ಸಚಿವ ಸ್ಥಾನ ಕೈತಪ್ಪಿರುವುದು ಯಾಕೆ? ನಾನು ಮಾಡಿರುವ ತಪ್ಪಾದರೂ ಏನು? ಪಕ್ಷ ವಿರೋಧಿಗಳ ವಿರುದ್ಧ ಹೋರಾಟ ಮಾಡಿದ್ದೇ ತಪ್ಪಾ ಎಂದು ಪ್ರಶ್ನಿಸಿ ಭಾವುಕರಾಗಿದ್ದರಂತೆ. ಆಗ ಶಾಸಕರನ್ನು ಸಮಾಧಾನಪಡಿಸಲು ಮುಂದಾದ ಬಿಎಸ್‌ವೈ, ಎಲ್ಲವೂ ಮುಗಿದೇ ಹೋಯ್ತು ಅಂತಾ ಭಾವಿಸುವುದು ಬೇಡ. ಪಕ್ಷದಲ್ಲಿ ಮುಂದೆ ಒಳ್ಳೆಯ ಭವಿಷ್ಯವಿದೆ. ಒಳ್ಳೆಯ ಅವಕಾಶ ಸಿಗಲಿದೆ ಎಂದು ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ.

ಇನ್ನೂ ಸಚಿವ ಸ್ಥಾನ ಕೈತಪ್ಪುತ್ತಿದಂತೆ ಸರಣಿ ಟ್ವೀಟ್​ ಮಾಡಿರುವ ರೇಣುಕಾಚಾರ್ಯ ಅವರು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗದೆ ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಂಘಟಿಸಲು ವಿನಂತಿಸುತ್ತೇನೆ.

ಪಕ್ಷ ನನಗೆ ತಾಯಿ ಸಮಾನ, ನನ್ನ ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ. ಜನ ಸೇವೆಯೇ ನನ್ನ ಕಾಯಕ, ನನ್ನ ಸಂಪೂರ್ಣ ಜೀವನವನ್ನು ನನ್ನ ಮತ ಕ್ಷೇತ್ರದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ಸೇವೆಗೆ ಮುಡಿಪಿಟ್ಟಿದ್ದೇನೆ ಎಂದು ಹೇಳಿದ್ದಾರೆ.

Source: newsfirstlive.com Source link