ಯಡಿಯೂರಪ್ಪನವರ ಆಶೀರ್ವಾದ ಪಡೆದ ನೂತನ ಸಚಿವ ಶಿವರಾಮ್ ಹೆಬ್ಬಾರ್

ಕಾರವಾರ: ಬಸವರಾಜ್ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ರವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ಇವರು ಈ ಹಿಂದಿನ ಯಡಿಯೂರಪ್ಪನವರ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ 1 ವರ್ಷ 5 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಇನ್ನು ಹೊಸ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತಿದ್ದಕ್ಕೆ ಯಲ್ಲಾಪುರ ಕ್ಷೇತ್ರದ ಜನರಿಗೆ ಹೆಬ್ಬಾರ್ ರವರು ಕೃತಜ್ಞತೆ ಸಲ್ಲಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಇದೀಗ ಬೊಮ್ಮಾಯಿ ಸರ್ಕಾರದ ಸಚಿವರ ಪಟ್ಟಿಯಲ್ಲಿ ಸುರೇಶ್ ಕುಮಾರ್ ಹೆಸರು ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಭಾವುಕರಾಗಿದ್ದಾರೆ.

ಸುರೇಶ್ ಕುಮಾರ್ ಜೊತೆ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ.ಪಿ ಯೋಗೇಶ್ವರ್, ಆರ್ ಶಂಕರ್ ಹಾಗೂ ಶ್ರೀಮಂತ ಪಾಟೀಲ್ ಇವರುಗಳ ಹೆಸರನ್ನೂ ಕೂಡ ಕೈ ಬಿಡಲಾಗಿದೆ. ಇದನ್ನೂ ಓದಿ: ಪಾರ್ಟಿಯಿಂದ ಉಚ್ಛಾಟನೆ ಮಾಡಿದ್ರೂ ಬಿಜೆಪಿಗೇ ವೋಟ್ ಹಾಕೋದು: ಸಿದ್ದು ಸವದಿ

Source: publictv.in Source link