ಹಗರಣದಲ್ಲಿ ಸಿಲುಕಿರೋರಿಗೆ ಮಂತ್ರಿಗಿರಿ.. ಇದು ಇತರೆ ಶಾಸಕಿಯರಿಗೆ ಆದ ಅವಮಾನ -ಬಿಜೆಪಿ ಶಾಸಕಿ

ಹಗರಣದಲ್ಲಿ ಸಿಲುಕಿರೋರಿಗೆ ಮಂತ್ರಿಗಿರಿ.. ಇದು ಇತರೆ ಶಾಸಕಿಯರಿಗೆ ಆದ ಅವಮಾನ -ಬಿಜೆಪಿ ಶಾಸಕಿ

ಬೆಂಗಳೂರು: ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ ಒಂದೇ ಮನೇಲಿ ಎರಡು ಮೂರು ಅಧಿಕಾರವನ್ನ ಪಕ್ಷ ನೀಡಿದೆ ಅಂತಾ ಹಿರಿಯೂರು ಶಾಸಕಿ ಪೂರ್ಣಿಮ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವರಿಗೆ ಪ್ರಮಾಣ ವಚನ ಸಂಭ್ರಮ; BSY ಬೆರಳಿಗೆ ಮಹಿಳೆ ಸೀರೆ ಪಿನ್ ಚುಚ್ಚಿ ನೋವು

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸಚಿವ ಸಂಪುಟ ರಚನೆ ಮಾಡಿದರು. ಬೊಮ್ಮಾಯಿ ಕ್ಯಾಬಿನೆಟ್​ನಲ್ಲಿ ಕಳಂಕಿತ ಸಚಿವೆ  ಶಶಿಕಲಾ ಜೊಲ್ಲೆ ಅವರೂ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಪೂರ್ಣಿಮಾ ಶ್ರೀನಿವಾಸ್ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದರು. ಹೀಗಾಗಿ ಶಶಿಕಲಾ ಜೊಲ್ಲೆ ಅವರ ಹೆಸರನ್ನ ಪ್ರಸ್ತಾಪಿಸದೇ ಫೇಸ್​ಬುಕ್​ನಲ್ಲಿ ತಮ್ಮ ನೋವನ್ನ ಹಂಚಿಕೊಂಡಿರುವ ಪೂರ್ಣಿಮಾ ಶ್ರೀನಿವಾಸ್.. ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ ಒಂದೇ ಮನೇಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ. ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿ ಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ ಎಂದು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ಅದೇ ಪೋಸ್ಟ್​ಗೆ ಬಂದ ಕಮೆಂಟ್​ಗೆ ಪ್ರತಿಕ್ರಿಯಿಸುತ್ತಾ ಜೊಲ್ಲೆಯವರ ಹೆಸರನ್ನೂ ಪೂರ್ಣಿಮಾ ಪ್ರಸ್ತಾಪಿಸಿದ್ದಾರೆ.

blank

ಇದನ್ನೂ ಓದಿ: ಕೊನೆಗೂ ಸಂಪುಟ ರಚಿಸಿದ ಬೊಮ್ಮಾಯಿ; ಪ್ರಮಾಣವಚನ ಸ್ವೀಕರಿಸಿದ 29 ನೂತನ ಸಚಿವರು

blank

ಎಲ್ಲರಿಗೂ ನಮಸ್ಕಾರ,
ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇದ್ದಾಗಲೂ ನಾನು ಪಕ್ಷನಿಷ್ಠೆ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ-ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಹಾಗೂ ಎಂಎಲ್ಸಿ ಚುನಾವಣೆಯಲ್ಲೂ ಕೂಡ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ.

ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ ತಂದಿದ್ದೆ. ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯ ವಾಗಿದ್ದವು ಪಕ್ಷವು ಅದನ್ನೆಲ್ಲ ಮರೆತಿದೆ. ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ.

ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ, ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ ಒಂದೇ ಮನೇಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ. ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿ ಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್​ ಅವರು, ಚಂದ್ರಪ್ಪ ರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು.

ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯವು 80ರಷ್ಟು ಭಾಗವು ಬಿಜೆಪಿಗೆ ಮತ ನೀಡಿದೆ, ಪಕ್ಷ ಮರೆಯಬಾರದಿತ್ತು. ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ. ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಎಲ್ಲಾ ಸಚಿವರಿಗೂ ಹೃದಯಪೂರ್ವಕ ಅಭಿನಂದನೆಗಳು.
ಪೂರ್ಣಿಮ ಶ್ರೀನಿವಾಸ್, ಹಿರಿಯೂರು ಶಾಸಕಿ

ಇದನ್ನೂ ಓದಿ: ಲೇಟ್​ ಆಗಿ ಬಂದಿದ್ದಕ್ಕೆ ಝೀರೋ ಟ್ರಾಫಿಕ್​​ನಲ್ಲಿ ಬಂದು ಶಶಿಕಲಾ ಜೊಲ್ಲೆ ಪ್ರಮಾಣ ವಚನ..!

Source: newsfirstlive.com Source link