ಪುರುಷರ ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ -41 ವರ್ಷಗಳ ಬಳಿಕ ಒಲಿಂಪಿಕ್ಸ್​ನಲ್ಲಿ ಟೀಂ ಇಂಡಿಯಾ ಸಾಧನೆ

ಪುರುಷರ ಹಾಕಿಯಲ್ಲಿ ಭಾರತಕ್ಕೆ ಕಂಚಿನ ಪದಕ -41 ವರ್ಷಗಳ ಬಳಿಕ ಒಲಿಂಪಿಕ್ಸ್​ನಲ್ಲಿ ಟೀಂ ಇಂಡಿಯಾ ಸಾಧನೆ

ಒಲಿಂಪಿಕ್ಸ್​​ 2020ರಲ್ಲಿ ಜರ್ಮನಿ ವಿರುದ್ಧ 5-4 ಗೋಲು​​ಗಳ ಅಂತರದಲ್ಲಿ ಭಾರತದ ಪುರುಷರ ಹಾಕಿ ತಂಡ ಗೆದ್ದು ಬೀಗಿದೆ. ಈ ಮೂಲಕ ಭಾರತ ತಂಡ ಕಂಚಿನ ಪದಕ ಪಡೆದುಕೊಂಡಿದೆ. ಬರೋಬ್ಬರಿ 41 ವರ್ಷಗಳ ಬಳಿಕ ಪುರುಷರ ಹಾಕಿ ತಂಡ ಒಲಿಂಪಿಕ್ಸ್​​ನಲ್ಲಿ ಪದಕ ಗೆದ್ದ ಸಾಧನೆಯನ್ನು ಮಾಡಿದೆ. ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಪುರುಷರ ಹಾಕಿ ತಂಡ ಇದುವರೆಗೂ ಮೂರು ಕಂಚು, ಒಂದು ಬೆಳ್ಳಿ, 8 ಚಿನ್ನದ ಪದಕಗಳನ್ನು ಗೆದ್ದು ತಂದಿದೆ. ಇನ್ನೂ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಇದುವರೆಗೂ 4 ಪದಕಗಳು ಲಭ್ಯವಾಗಿದೆ. ಪದಕ ಗೆದ್ದ ಟೀಂ ಇಂಡಿಯಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

Source: newsfirstlive.com Source link