ರಕ್ತ ಚಂದನ ಕಳವು ಮಾಡ್ತಿದ್ದ ಖತರ್ನಾಕ್​ ಗ್ಯಾಂಗ್​ CCB ಬಲೆಗೆ -₹4.5 ಕೋಟಿ ಮೌಲ್ಯದ ರಕ್ತ ಚಂದನ ವಶ

ರಕ್ತ ಚಂದನ ಕಳವು ಮಾಡ್ತಿದ್ದ ಖತರ್ನಾಕ್​ ಗ್ಯಾಂಗ್​ CCB ಬಲೆಗೆ -₹4.5 ಕೋಟಿ ಮೌಲ್ಯದ ರಕ್ತ ಚಂದನ ವಶ

ಬೆಂಗಳೂರು: ಹಲವಾರು ದಿನಗಳಿಂದ ರಕ್ತ ಚಂದನ ಕಳವು ಮಾಡುತ್ತಿದ್ದ ಖತರ್ನಾಕ್​​ ಗ್ಯಾಂಗ್​​​ ಸಿಸಿಬಿ ಬಲೆಗೆ ಬಿದ್ದಿದೆ. ಇಬ್ಬರನ್ನು ಬಂಧಿಸಿರುವ ಸಿಸಿಬಿ ಬಂಧಿತರಿಂದ 4.5 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ ಮಾಡಿದೆ ಎಂದು ವರದಿಯಾಗಿದೆ.

blank

ಆಂಧ್ರ ಹಾಗೂ ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಹಾಗೂ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 4.5 ಕೋಟಿ ಮೌಲ್ಯದ 9 ಟನ್ ರಕ್ತ ಚಂದನ ಜಪ್ತಿ ಮಾಡಲಾಗಿದೆ ಎಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

ಸದ್ಯ ಇಬ್ಬರು ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿರುವದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಲಕ್ಷಾಂತರ ಮೌಲ್ಯದ ಅಕ್ರಮ ರಕ್ತ ಚಂದನ ವಶ: ಇಬ್ಬರ ಬಂಧನ

Source: newsfirstlive.com Source link