ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಶಾಸಕ ಜಮೀರ್!

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿರುವ ಮಾಹಿತಿ ಹೊರಬಿದ್ದಿದೆ.

ಹೌದು. ಮಗಳ ಮದುವೆಯ ಸಂದರ್ಭದಲ್ಲಿ ಜಮೀರ್ ಅವರು ಮನ್ಸೂರ್ ಬಳಿ 9 ಕೋಟಿ ಹಣ ಪಡೆದಿದ್ದಾರೆ. ಉಳಿದಿದ್ದ ಹಣವನ್ನು ಚಿನ್ನದ ರೂಪದಲ್ಲಿ ಪಡೆದುಕೊಂಡಿದ್ದರು. ಐಎಂಎ ಗೋಲ್ಡ್‍ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಜಮೀರ್, ಬಡ್ಡಿಯ ರೂಪದಲ್ಲಿಯೂ ಕೂಡ ಹಣ ಪಡೆದುಕೊಂಡಿದ್ದರೆಂಬ ಮಾಹಿತಿ ತಿಳಿದುಬಂದಿದೆ.

ಸದ್ಯ ಶಾಸಕ ಮತ್ತು ಮಾಜಿ ಸಚಿವ ರೋಷನ್ ಬೇಗ್ ಜಾರಿ ನಿರ್ದೇಶನಾಲಯದ ಬಂಧನದ ಭೀತಿಯಲ್ಲಿದ್ದಾರೆ. ಇಂದು ಬೆಳಗ್ಗೆ ಇಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!

ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡಿದ್ದರು. 2.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು 5 ಕೋಟಿ ರೂ.ಗೆ ಮಾರಿದ್ದರು. ಇದೇ ನಿವೇಶನ ಜಮೀರ್ ಅಹ್ಮದ್ ಅವರಿಗೆ ಕಂಟಕವಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ಸಂಬಂಧ ಎಸ್‍ಐಟಿ ಮತ್ತು ಸಿಬಿಐ ವಿಚಾರಣೆಗೂ ಜಮೀರ್ ಅಹ್ಮದ್ ಹಾಜರಾಗಿದ್ದರು.

Source: publictv.in Source link