ಸಚಿವೆ ಶಶಿಕಲಾ ಜೊಲ್ಲೆಯನ್ನ ಸಂಪುಟದಿಂದ ವಜಾಗೊಳಿಸಿ; ಯುವ ಕಾಂಗ್ರೆಸ್​ ಪ್ರತಿಭಟನೆ

ಸಚಿವೆ ಶಶಿಕಲಾ ಜೊಲ್ಲೆಯನ್ನ ಸಂಪುಟದಿಂದ ವಜಾಗೊಳಿಸಿ; ಯುವ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು: ಭ್ರಷ್ಟಚಾರ ಆರೋಪವೊತ್ತ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಯುವ ಕಾಂಗ್ರೆಸ್​​ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ಕಾಂಗ್ರೆಸ್​ ಭವನದಲ್ಲಿ ಪ್ರತಿಭಟನೆ ಮಾಡಿದ ಕೈ ಕಾರ್ಯಕರ್ತರು, ಸಂಪುಟದಿಂದ ಶಶಿಕಲಾ ಜೊಲ್ಲೆ ಅವರನ್ನು ವಜಾಯೊಳಿಸಿ ಎಂದು ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದರು.

ಬೆಂಗಳೂರು ಕಾಂಗ್ರೆಸ್​ ಘಟಕದ ಬೆನ್ನಲ್ಲೇ ಯುವ ಕಾಂಗ್ರೆಸ್​ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಹಲವು ಕಾರ್ಯಕರ್ತರು ಭಾಗಿಯಾಗಿದ್ದರು. ಪ್ರತಭಟನೆ ವೇಳೆ ಶಶಿಕಲಾ ಜೊಲ್ಲೆಯವರ ಭಾವಚಿತ್ರ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಂತ್ರಿ ಸ್ಥಾನ ಕೈ ತಪ್ಪಿದ್ದರ ಬಗ್ಗೆ ಮೌನಮುರಿದ ಬಿಎಸ್​​ವೈ ಪುತ್ರ ಬಿ.ವೈ ವಿಜಯೇಂದ್ರ

ಇನ್ನು, ಶಶಿಕಲಾ ಜೊಲ್ಲೆ ವಿರುದ್ಧ ಭ್ರಷ್ಟಾಚಾರ ಆರೋಪದ ತನಿಖೆ ಆಗಬೇಕು ಎಂದು ಮಾಜಿ ಸಚಿವ ಸತೀಶ್​​ ಜಾರಕಿಹೊಳಿ ಆಗ್ರಹಿಸಿದರು. ಜೀರೋ ಟ್ರಾಫಿಕ್​​​ನಲ್ಲಿ ಕರೆ ತಂದು ಜೊಲ್ಲೆಯವರಿಗೆ ಮಂತ್ರಿ ಸ್ಥಾನ ನೀಡಿದ ಬಿಜೆಪಿ ಏನು ಮಾಡುತ್ತಿದೆ ಎಂಬುದಕ್ಕೆ ಇದೇ ಉದಾಹರಣೆ ಎಂದರು.

Source: newsfirstlive.com Source link