ಕೊನೆಗೂ ಎನ್​.ಮಹೇಶ್ BJPಗೆ ಸೇರ್ಪಡೆ: ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದ್ರು ಬೊಮ್ಮಾಯಿ

ಕೊನೆಗೂ ಎನ್​.ಮಹೇಶ್ BJPಗೆ ಸೇರ್ಪಡೆ: ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದ್ರು ಬೊಮ್ಮಾಯಿ

ಬೆಂಗಳೂರು: ಬಿಎಸ್​ಪಿ ಉಚ್ಛಾಟಿತ ಶಾಸಕ ಎನ್​.ಮಹೇಶ್​. ಕೊನೆಗೂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಜೆಪಿಯ ನಾಯಕರ ಸಮ್ಮುಖದಲ್ಲಿ ಇಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಇಂದು ಪಕ್ಷಕ್ಕೆ ಸೇರ್ಪಡೆಯಾದ ಅವರಿಗೆ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

blank

ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹೇಶ್ ಚಳುವಳಿಯ ಹಿನ್ನೆಲೆಯಿಂದ ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು, ಅವರು ಶಾಸಕರಾಗುವ ಮುನ್ನವೇ ದಲಿತರ ಹೃದಯ ಗೆದ್ದವರು. ನಮ್ಮ ಪಕ್ಷದ ಸಿದ್ಧಾಂತ, ತತ್ವ ಮನವರಿಕೆಯಾದ ಮೇಲೆ ಪಕ್ಷಕ್ಕೆ ಬರ್ತಿದ್ದಾರೆ. ಅವರ ಆಗಮನದಿಂದ ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ ಇನ್ಮುಂದೆ ಅವರ ಸೇವೆಯನ್ನ ಪಕ್ಷ ಬಳಸಿಕೊಳ್ಳಲಿದೆ ಎಂದಿದ್ದಾರೆ.

ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಶಾಸಕ ‌ಎನ್.ಮಹೇಶ್ ನಾನು ಬಿಜೆಪಿಯನ್ನು ಸೇರಲು ರಾಜ್ಯದಲ್ಲಿ ಬಿಜೆಪಿ ಮಾಡಿದ ಅಭಿವೃದ್ಧಿ ಕಾರಣ. ರಾಜ್ಯ ಮತ್ತು ದೇಶದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಸೇರ್ತಿದ್ದೇನೆ. ಬೊಮ್ಮಾಯಿ 12 ವರ್ಷಗಳಿಂದ ನನಗೆ ಪರಿಚಯ ಅವರ ಜೊತೆ ಸೇರಿಕೊಂಡು ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದರು.

Source: newsfirstlive.com Source link