ಮೂರನೆ ಅಲೆ ಆತಂಕ: ಇಂದಿನಿಂದ ಕುಕ್ಕೆ, ಧರ್ಮಸ್ಥಳದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

ಮೂರನೆ ಅಲೆ ಆತಂಕ: ಇಂದಿನಿಂದ ಕುಕ್ಕೆ, ಧರ್ಮಸ್ಥಳದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

ದಕ್ಷಿಣ ಕನ್ನಡ : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಜಿಲ್ಲೆಯಾದ್ಯಂತ ಆತಂಕ ಉಂಟು ಮಾಡಿದೆ.

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡು ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಜಿಲ್ಲೆಯ ದೇವಾಲಯಗಳಲ್ಲಿ ಎಲ್ಲಾ ಬಗೆಯ ಸೇವೆಗಳನ್ನು ನಿರ್ಬಂಧಿಸಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸುವಂತೆ ಆದೇಶ ಹೊರಡಿಸಿದೆ.

blank

ಜಿಲ್ಲೆಯ ಪ್ರಮುಖ ದೇವಾಲಯಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ , ಶ್ರೀ ಕ್ಷೇತ್ರ ಕಟೀಲು ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದ್ದು, ವಾರಾಂತ್ಯದಲ್ಲಿ ದೇವರ ದರ್ಶನ ಕೂಡ ನಿಷೇಧಿಸಲಾಗಿದೆ.

ಇದನ್ನೂ  ಓದಿ: ಐಸಿಸ್​ ಜತೆ ನಂಟು ಶಂಕೆ: ಮಾಜಿ ಕಾಂಗ್ರೆಸ್​ ಶಾಸಕ, ಸಾಹಿತಿ ಇದಿನಬ್ಬ ಪುತ್ರನ ಮನೆ ಮೇಲೆ NIA ದಾಳಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪೂಜಾ ಸೇವೆ, ಪ್ರಸಾದ, ಅನ್ನಸಂತರ್ಪಣೆ, ವಸತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನೂ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೂಡ ಸೇವೆಗಳಿಗೆ ನಿರ್ಬಂಧ ಹೇರಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಪ್ರಮುಖ ಸೇವೆಗಳಾದ ಸರ್ಪಸಂಸ್ಕಾರ ಪೂಜೆ, ಆಶ್ಲೇಷಬಲಿ, ನಾಗಪ್ರತಿಷ್ಟೆ ಸೇರಿದಂತೆ ಎಲ್ಲಾ ಪೂಜಾ ಸೇವೆಗಳನ್ನು ನಿಷೇಧಿಸಲಾಗಿದೆ.

Source: newsfirstlive.com Source link