ಐವರು IAS​​ ಅಧಿಕಾರಿಗಳ ವರ್ಗ; ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್​​ ಪ್ರಸಾದ್​ ನೇಮಕ

ಐವರು IAS​​ ಅಧಿಕಾರಿಗಳ ವರ್ಗ; ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್​​ ಪ್ರಸಾದ್​ ನೇಮಕ

ಬೆಂಗಳೂರು: 5 ಮಂದಿ ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್​​ ಪ್ರಸಾದ್​ ಅವರನ್ನು ರಾಜ್ಯದ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇನ್ನು ಕೃಷಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಾಜ್​​ಕುಮಾರ್ ಖಾತ್ರಿ, ಐಟಿ – ಬಿಟಿ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಡಾ. ಇ.ವಿ ರಮಣರೆಡ್ಡಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ: ಅಣ್ಣಾಮಲೈನ ಭಾಳ ದೊಡ್ಡ ಮನುಷ್ಯ ಮಾಡೋ ಅವಶ್ಯಕತೆಯಿಲ್ಲ -ಬೊಮ್ಮಾಯಿ ಗುಡುಗು

ಅರಣ್ಯ ಮತ್ತು ಪರಿಸರ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಸಿಎಸ್​ ಆಗ ಜಾವೇದ್ ಅಕ್ತರ್ ನೇಮಕಗೊಂಡಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದ್ದಾರೆ.

Source: newsfirstlive.com Source link