ಜಮೀರ್, ಬೇಗ್ ಮನೆಗೆ ಇಡಿ ದಾಳಿ- ಸಿದ್ದರಾಮಯ್ಯನವ್ರೇ ಇದರ ಪಲಾನುಭವಿಯಂತೆ!

– ಸಿದ್ದು ಕುಟುಕಿದ ಬಿಜೆಪಿ

ಬೆಂಗಳೂರು: ಗುರುವಾರ ಬೆಳಗ್ಗೆ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಮನೆಗೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ನಡೆಸಿದ್ದಾರೆ. ಇಡಿ ದಾಳಿ ಖಂಡಿಸಿದ ಕಾಂಗ್ರೆಸ್ ಗೆ ಬಿಜೆಪಿ ಕುಟುಕಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ನೂರಾರು ಕೋಟಿ ಲೂಟಿ ಹೊಡೆದು ಅಕ್ರಮ ಸಂಪತ್ತು ಗಳಿಸಿರುವ ಜಮೀರ್ ಅಹ್ಮದ್ ಅವರು ಈಗ ಇಡಿ ಬಲೆಗೆ ಬಿದ್ದಿರುವುದು ಯಾರಿಗೆ ಲಾಭ ತರಬಹುದೆಂಬುದಕ್ಕೆ ಉತ್ತರ ಲಭಿಸಿದೆ. ಮುಂದಿನ ಚುನಾವಣೆಗಾಗಿ ಸುರಕ್ಷಿತ ಕ್ಷೇತ್ರ ಅರಸುತ್ತಿರುವ ಸಿದ್ದರಾಮಯ್ಯನವರೇ ಇದರ ಸಂಪೂರ್ಣ ಫಲಾನುಭವಿಯಾಗಿದ್ದಾರೆ. ನೆಪ ಮಾತ್ರಕ್ಕೆ ಖಂಡಿಸುತ್ತಿದ್ದಾರೆ! ಎಂದು ಹೇಳುತ್ತಾ ಬುರುಡೆರಾಮಯ್ಯ ಅಂತ ಹ್ಯಾಶ್ ಟ್ಯಾಗ್ ಬಳಸಿ ಜಮೀರ್ ಹಾಗೂ ಸಿದ್ದರಾಮಯ್ಯಗೆ ಟ್ಯಾಗ್ ಮಾಡಿದೆ.

ನಿನ್ನೆ ಬೆಳಗ್ಗೆ 8 ಗಂಟೆ ಸುಮಾರಿಗೆ ಇಡಿ ಅಧಿಕಾರಿಗಳು ಜಮೀರ್ ಹಾಗೂ ರೋಷನ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಲವು ಗಂಟೆಗಳ ಕಾಲ ಮನೆಯನ್ನು ಜಾಲಾಡಿದ್ದಾರೆ. ಇಡಿ ದಾಳಿ ನಡೆಯುತ್ತಿದ್ದಂತೆಯೇ ಜಮೀರ್ ಹಾಗೂ ರೋಷನ್ ಬೇಗ್ ಅಭಿಮಾನಿಗಳು ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ ಕಾಂಗ್ರೆಸ್ ನಾಯಕರು ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕಟುವಾಗಿ ಖಂಡಿಸಿದ್ದರು. ಇದನ್ನೂ ಓದಿ: ಡಿಕೆಶಿ ಅವರೇ ಯಾಕೆ ಜಮೀರ್ ಮನೆ ಮೇಲೆ ದಾಳಿ ಮಾಡಿಸಿರಬಾರದು: ಎಸ್‍ಟಿಎಸ್

ಇಡಿ ದಾಳಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕರು, ಎಲ್ಲಾ ದಾಖಲೆಗಳನ್ನು ನೀಡಿದ ಬಳಿಕ ಅವರು ಸಮಾಧಾನ ಆಗಿ ನಾವು ಕರೆದಾಗ ಬರಬೇಕು ಅಂತ ಹೇಳಿ ಹೋಗಿದ್ದಾರೆ. ನೋಟಿಸ್ ಏನೂ ಕೊಟ್ಟಿಲ್ಲ. ಸಹೋದರರನ್ನು ತನಿಖೆ ಮಾಡಿಲ್ಲ. ನನ್ನ ಮನೆ ಹುಡುಕಾಡಿದರು ಅಷ್ಟೆ. ಒಟ್ಟಿನಲ್ಲಿ ಅವರು ಏನಿ ನಿರೀಕ್ಷೆ ಇಟ್ಕೊಂಡು ಬಂದಿದ್ದಾರೋ ಆ ನಿರೀಕ್ಷೆಗೆ ತಕ್ಕಂತೆ ಮನೆಯಲ್ಲಿ ಏನೂ ಸಿಕ್ಕಿಲ್ಲ. ನಾನು ಲೂಟಿ ಮಾಡಿಲ್ಲ. ಅಭಿಮಾನಿಗಳೇ ನನ್ನ ಆಸ್ತಿ. ಕೇಳಿದ ಎಲ್ಲ ದಾಖಲೆ ಕೊಟ್ಟಿದ್ದೀನಿ ಎಂದು ಜಮೀರ್ ಹೇಳಿದರು.

blank

3-4 ದೂರು ಬಂದಿತ್ತಂತೆ. ನನ್ನ ವ್ಯವಹಾರ ಎಲ್ಲ ವೈಟ್ ಅಮೌಂಟ್ ಎಂದಿದ್ದಾರೆ. ಎಲ್ಲರದ್ದೂ ನನ್ನ ಮೇಲೆಯೇ ಕಣ್ಣು. ರಾಜಕೀಯದಲ್ಲಿ ಶತ್ರುಗಳು ಸಹಜ. ಐಎಂಎ ಬಗ್ಗೆ ಚರ್ಚೆಯೇ ಆಗಿಲ್ಲ. ಅಧ್ಯಕ್ಷರಿಗೆ ಧನ್ಯವಾದಗಳು. ಮನೆ ಕಟ್ಟಲು 7 ವರ್ಷ ಆಗಿದೆ. ಮನೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದ್ರು ಕೊಟ್ಟಿದ್ದೀನಿ. ನನ್ನ ಮನೆ ಐಷಾರಾಮಿ ಆಗಿದೆ ಎಂದು ತಿಳಿಸಿದ್ದಾರೆ.

blank

ನನ್ನ 2006ರಲ್ಲಿ ಜಾಗ ತಗೆದುಕೊಂಡಿದ್ದೆ. ನನ್ನ ಮನೆ ಕಟ್ಟಲು 7 ವರ್ಷ ಆಗಿದೆ. ಐಎಂಎ ವಿಚಾರವಾಗಿ ದಾಳಿ ನಡೆದಿಲ್ಲ. ಇಡಿ ಅಧಿಕಾರಿಗಳು ಕೇಳಿದ ದಾಖಲೆ ಕೊಟ್ಟಿದ್ದೇನೆ. ರೋಷನ್ ಬೇಗ್ ನಿವಾಸದ ದಾಳಿ ಬಗ್ಗೆ ಗೊತ್ತಿಲ್ಲ. ನಾನು ಯಾರ ಮನೆಯಲ್ಲೂ ಲೂಟಿ ಮಾಡಿಲ್ಲ. ನಾನು ದುಡಿದು ಸಂಪಾದನೆ ಮಾಡಿರುವೆ ಎಂದು ಹೇಳಿದರು.

Source: publictv.in Source link