ಗಡಿ ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ -ಸಿಎಂ ಬೊಮ್ಮಾಯಿ ಘೋಷಣೆ

ಗಡಿ ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ -ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಲ್ಲಿ ಮತ್ತೆ ವೀಕೆಂಡ್​ ಕರ್ಫ್ಯೂ ಜಾರಿ ಮಾಡಲಾಗುತ್ತದೆ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ರಾಜ್ಯದಲ್ಲಿರುವ ಎಲ್ಲಾ ಗಡಿ ಜಿಲ್ಲೆಗಳಲ್ಲಿ ಹದ್ದಿನ ಕಣ್ಣಿಡಲು ಸೂಚನೆ ನೀಡಲಾಗಿದೆ. ಅಲ್ಲದೇ ವಾರಾಂತ್ಯದ ಕರ್ಫ್ಯೂವನ್ನ ಗಡಿ ಜಿಲ್ಲೆಗೆ ಪುನಃ ಜಾರಿ ಮಾಡಲಾಗುತ್ತದೆ ಅಂತಾ ಘೋಷಣೆ ಮಾಡಿದರು.

ಜೊತೆಗೆ ನೈಟ್​ ಕರ್ಫ್ಯೂ ಅವನ್ನ ಕಠಿಣವಾಗಿ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಷ್ಟು ರಾತ್ರಿ 10 ಗಂಟೆಯಿಂದ ಆರಂಭವಾಗುತ್ತಿದ್ದ ನೈಟ್​ ಕರ್ಫ್ಯೂ ಅವನ್ನ ರಾತ್ರಿ 9 ಗಂಟೆಯಿಂದಲೇ ಆರಂಭಿಸುವಂತೆ ಸೂಚನೆ ನೀಡಲಾಗುತ್ತದೆ ಅಂತಾ ತಿಳಿಸಿದರು.

Source: newsfirstlive.com Source link