ರಾಜ್ಯದ 8 ಜಿಲ್ಲೆಗಳಲ್ಲಿ ಇಂದಿನಿಂದಲೇ ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇಂದಿನಿಂದಲೇ ಜಾರಿಯಾಗಲಿದೆ.

ಕೊರೊನಾ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ, ಕೊಡಗು,  ಮೈಸೂರು, ಚಾಮರಾಜನಗರ, ಬೆಳಗಾವಿ,  ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್‍ಡೌನ್ ಘೋಷಣೆಯಾಗಿದೆ.

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯನ್ನು ಹೆಚ್ಚಿಸಲಾಗಿದ್ದು, ರಾತ್ರಿ 10ರ ಬದಲಾಗಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಇರಲಿದೆ.

ಇಂದಿನ ಸಭೆಯಲ್ಲಿ ಶಾಲಾ, ಕಾಲೇಜು ಪ್ರಾರಂಭದ ಬಗ್ಗೆ ಚರ್ಚೆ ನಡೆದಿದೆ. ಎರಡು ಹಂತದಲ್ಲಿ ಶಾಲಾ, ಕಾಲೇಜುಗಳು ಪ್ರಾರಂಭವಾಗಲಿದೆ. ಮೊದಲ ಹಂತ 9ರಿಂದ 12ನೇ ತರಗತಿವರೆಗೆ ಆಗಸ್ಟ್ 23 ರಿಂದ ಆರಂಭವಾಗಲಿದೆ. ಆಗಸ್ಟ್ ಕೊನೆಯ ವಾರದಲ್ಲಿ ಪರಿಸ್ಥಿತಿ ನೋಡಿಕೊಂಡು 1 ರಿಂದ 8 ತರಗತಿವರೆಗಿನ ಶಾಲೆಗಳನ್ನು ಯಾವಾಗ ಆರಂಭಿಸಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ.

Source: publictv.in Source link