ಭಟ್ಕಳದಲ್ಲಿ NIA ದಾಳಿ- ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

ಕಾರವಾರ: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ (ರಾಷ್ಟ್ರೀಯ ತನಿಖಾ ದಳ) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ದಾಳಿ ನಡೆಸಿದೆ. ಭಟ್ಕಳದ ಉಮರ್ ಸ್ಟ್ರೀಟ್, ತೆಂಗಿನ ಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದೆ.

ಭಟ್ಕಳದ ಅಮೀನ್ ಜುವೇಬ್ ಹಾಗೂ ಜವಾದ್ ಇಬ್ಬರನ್ನು ತೀವ್ರ ತನಿಖೆ ನಡೆಸುತ್ತಿದ್ದು, ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ತಮ್ಮನನ್ನೂ ಎನ್‍ಐಎ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್‍ಐಎ ದಾಳಿ

ಸ್ಥಳದಲ್ಲಿ ಕೆಎಸ್‍ಆರ್ ಪಿ ತುಕಡಿ ಜಮಾವಣೆ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮೊಕ್ಕಾಂ ಹೂಡಿದ್ದಾರೆ. ವಶಕ್ಕೆ ಪಡೆದವರು ಐಸಿಸ್ ನಂಟಿರುವ ಕುರಿತು ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

Source: publictv.in Source link