ಸಿಎಂ ರಾಜಕೀಯ ಕಾರ್ಯದರ್ಶಿಗಳ ಹುದ್ದೆಗೆ ನೇಮಕ ರದ್ದು- ಹೈಕೋರ್ಟ್​ಗೆ ರಾಜ್ಯ ಸರ್ಕಾರ ಉತ್ತರ

ಸಿಎಂ ರಾಜಕೀಯ ಕಾರ್ಯದರ್ಶಿಗಳ ಹುದ್ದೆಗೆ ನೇಮಕ ರದ್ದು- ಹೈಕೋರ್ಟ್​ಗೆ ರಾಜ್ಯ ಸರ್ಕಾರ ಉತ್ತರ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಪ್ರಶ್ನಿಸಿ ವಕೀಲ ಎಸ್. ಉಮಾಪತಿ ಹೈಕೋರ್ಟ್​ಗೆ ಸಲ್ಲಿಸಿದ್ದ ಪಿಐಎಲ್​ ಇತ್ಯರ್ಥವಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ನೇಮಕ ರದ್ದು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​ಗೆ ಹೇಳಿಕೆ ನೀಡಿದೆ.

ಪಿಐಎಲ್ ಸಲ್ಲಿಕೆಯಾಗಿದ್ದ ಹಿನ್ನೆಲೆ ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಕೀಯ ಕಾರ್ಯದರ್ಶಿಗಳಾಗಿದ್ದವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರದಿಂದ ಸ್ಪಷ್ಟನೆ ಕೇಳಿತ್ತು.. ಈ ರೀತಿ ಹುದ್ದೆ ಸೃಷ್ಟಿ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ.. ಎಂದು ಸರ್ಕಾರದ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿತ್ತು. ಇಂದು‌ ಹೈಕೋರ್ಟ್​ಗೆ ಅವರ ನೇಮಕ ರದ್ದುಗೊಳಿಸಿರುವುದಾಗಿ ‌ಉತ್ತರ ನೀಡಿದೆ.

ಎನ್.ಆರ್.ಸಂತೋಷ್, ಎಸ್ ಆರ್ ವಿಶ್ವನಾಥ್, ಎಂಪಿ ರೇಣುಕಾಚಾರ್ಯ & ಶಂಕರಗೌಡ ಪಾಟೀಲ್ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪರ ರಾಜಕೀಯ ಕಾರ್ಯದರ್ಶಿಗಳಾಗಿದ್ದರು.

Source: newsfirstlive.com Source link