ಮತ್ತೆ ನೈಟ್ & ವೀಕೆಂಡ್ ಕರ್ಫ್ಯೂ; ಮನೆಯಿಂದ ಆಚೆ ಬರೋ ಮುನ್ನ ಮಾರ್ಗಸೂಚಿ ನೋಡಿ ಬಿಡಿ

ಮತ್ತೆ ನೈಟ್ & ವೀಕೆಂಡ್ ಕರ್ಫ್ಯೂ; ಮನೆಯಿಂದ ಆಚೆ ಬರೋ ಮುನ್ನ ಮಾರ್ಗಸೂಚಿ ನೋಡಿ ಬಿಡಿ

ಬೆಂಗಳೂರು: ಕೇರಳ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕೆಲವು ಕ್ರಮಗಳನ್ನ ತೆಗೆದುಕೊಂಡಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಹೊಸ ಮಾರ್ಗಸೂಚಿಯಲ್ಲಿ ಏನಿದೆ..?

  1. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.
  2. ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಕಲ್ಬುರ್ಗಿ ಮತ್ತು ಕೇರಳ ಗಡಿ ಜಿಲ್ಲೆಗಳಾದ ದ.ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
  3. ಶುಕ್ರವಾರ ರಾತ್ರಿ 9 ರಿಂದ ವೀಕೆಂಡ್ ಕರ್ಫ್ಯೂ ಆರಂಭವಾಗಲಿದ್ದು ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರಲಿದೆ.
  4. ರಾಜ್ಯಾದ್ಯಂತ ರಾತ್ರಿ 9-ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
  5. ಮದುವೆ ಸಮಾರಂಭಗಳಿಗೆ 100 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
  6. ಅಂತ್ಯಕ್ರಿಯೆಯಲ್ಲಿ ಗರಿಷ್ಠ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿ ಇದೆ.
  7. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿಯೊಂದಿಗೆ ದೇಗುಲ ಪ್ರವೇಶಕ್ಕೆ ಅವಕಾಶವಿದೆ.
  8. ಜಾತ್ರೆ, ಮೆರವಣಿಗೆ, ಹಬ್ಬಗಳಿಗೆ ಅವಕಾಶವಿಲ್ಲ.

Source: newsfirstlive.com Source link