ನೂರಾರು ಜನ ಸೇರಿಸಿ ಅದ್ಧೂರಿ ಕಾರ್ಯಕ್ರಮ- ನಿರ್ಗಮಿತ ತಹಶಿಲ್ದಾರ್ ಕೊರೊನಾ ರೂಲ್ಸ್ ಬ್ರೇಕ್

– ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಕಾರ್ಯಕ್ರಮ

ಕೋಲಾರ: ಕೊರೊನಾ ನಿಯಮ ಗಾಳಿಗೆ ತೂರಿ ಕೋಲಾರ ತಾಲೂಕಿನ ನಿರ್ಗಮಿತ ತಹಶೀಲ್ದಾರ್ ಶೋಭಿತಾರ ಅದ್ಧೂರಿ ಕಾರ್ಯಕ್ರಮ ಮಾಡಿದ್ದು, ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ಪೋಷಕರಿಗೆ 60 ವರ್ಷ ತುಂಬಿದಕ್ಕೆ ಕೋಲಾರ ಹೊರಹೊಲಯದ ನಂದಿನಿ ಪ್ಯಾಲೇಸ್ ನಲ್ಲಿ ವಿಶೇಷ ಪೂಜೆ ಹಾಗೂ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ನೂರಾರು ಜನ ಭಾಗವಹಿಸಿದ್ದಾರೆ. ಈ ಮೂಲಕ ಕೊರೊನಾ ನಿಯಮ ಗಾಳಿಗೆ ತೂರಿದ್ದಾರೆ. ಕಾರ್ಯಕ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿವೆ.

ಪೋಷಕರಿಗೆ 60 ವರ್ಷ ತುಂಬಿದ ಹಿನ್ನೆಲೆ ವಿಶೇಷ ಪೂಜೆ ಹಾಗೂ ಕಾರ್ಯಕ್ರಮ ಮಾಡಿದ್ದು, ಅದ್ಧೂರಿಯಾಗಿ ಹೂವಿನ ಅಲಂಕಾರದೊಂದಿದೆ ದೇವರಿಗೆ ಪೂಜೆ, ಭರ್ಜರಿ ಭೋಜನ ಕೂಟ ಆಯೋಜನೆ ಮಾಡಿದ್ದರು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸಹ ಭಾಗಿಯಾಗಿದ್ದು, ಸಾಮಾಜಿಕ ಅಂತರ ಇಲ್ಲದೆ, ಮಾಸ್ಕ್ ಧರಿಸದೆ ಫೋಟೋಗಳಿಗೆ ಫೋಸ್ ನೀಡಿದ್ದಾರೆ.

Source: publictv.in Source link