ರೆಡ್ಡಿ ಸಮಾಜಕ್ಕೆ ನಾಲ್ಕು ಮಂತ್ರಿ ಸ್ಥಾನ ಕೊಡಿ; ರೆಡ್ಡಿ ಜನ ಸಂಘದಿಂದ ಬೃಹತ್‌ ಪ್ರತಿಭಟನೆ

ರೆಡ್ಡಿ ಸಮಾಜಕ್ಕೆ ನಾಲ್ಕು ಮಂತ್ರಿ ಸ್ಥಾನ ಕೊಡಿ; ರೆಡ್ಡಿ ಜನ ಸಂಘದಿಂದ ಬೃಹತ್‌ ಪ್ರತಿಭಟನೆ

ನಮ್ಮ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿ ಎಂದು ಆಗ್ರಹಿಸಿ ಕರ್ನಾಟಕ ರೆಡ್ಡಿ ಜನಸಂಘದಿಂದ ಪ್ರತಿಭಟನೆ ಮಾಡಲಾಯ್ತು. ಕೋರಮಂಗಲದ ಕರ್ನಾಟಕ ರೆಡ್ಡಿ ಜನಸಂಘದ ಮುಖ್ಯ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಮುದಾಯದ ನೂರಾರು ಮುಂಖಡರು ಭಾಗಿಯಾಗಿದ್ದರು. ಈ ವೇಳೆ ಸಿಎಂ ಬಸವರಾಜ್​​ ಬೊಮ್ಮಾಯಿ ಅವರಿಗೆ ರೆಡ್ಡಿ ಅಭಿವೃಧ್ಧಿ ನಿಗಮ ಸ್ಥಾಪಿಸಬೇಕು, ಸಮುದಾಯಕ್ಕೆ 4 ಸಚಿವ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದರು.

ವೇಮಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ರೆಡ್ಡಿ ಸಮುದಾಯದ ಮುಖಂಡರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಸಿಎಂ ಬಸವರಾಜ್​​ ಬೊಮ್ಮಾಯಿ ಕ್ಯಾಬೀನೆಟ್​​ನಲ್ಲಿ ರೆಡ್ಡಿ ಸಮುದಾಯದ ಯಾವ ಶಾಸಕರಿಗೂ ಸಚಿವ ಸ್ಥಾನ ನೀಡಿಲ್ಲ. ಹಾಗಾಗಿ ಕೂಡಲೇ ನಮ್ಮ ಸಮುದಾಯಕ್ಕೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್​​​ಗೆ ‘ಅನ್ನಪೂರ್ಣೇಶ್ವರಿ ಕ್ಯಾಂಟೀನ್’ ಎಂದು ಹೆಸರಿಡಿ; ಸಿಎಂಗೆ ಸಿ.ಟಿ ರವಿ ಮನವಿ

ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತಾಡಿದ ರೆಡ್ಡಿ ಜನಸಂಘದ ನಿರ್ದೇಶಕ ಆನಂದ್ ರೆಡ್ಡಿ, ನಮ್ಮ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿ 70 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ರೆಡ್ಡಿ ಸಮಾಜಕ್ಕೆ ಕನಿಷ್ಠ 4 ಮಂದಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲದೇ ಹೋದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

Source: newsfirstlive.com Source link