ಇಂಥದ್ದೇ ಖಾತೆ ಬೇಕು ಅಂದ್ರು ಕೊಡಲಿಲ್ಲ; ಹೀಗೆ ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ ಆನಂದ್​​ ಸಿಂಗ್​​

ಇಂಥದ್ದೇ ಖಾತೆ ಬೇಕು ಅಂದ್ರು ಕೊಡಲಿಲ್ಲ; ಹೀಗೆ ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ ಆನಂದ್​​ ಸಿಂಗ್​​

ಬೆಂಗಳೂರು: ತಮಗೆ ನಿರೀಕ್ಷಿತ ಖಾತೆ ಸಿಕ್ಕಿಲ್ಲ ಎಂದು ಸಚಿವ ಆನಂದ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ನೂತನ ಸಚಿವರಿಗೆ ಖಾತೆಯನ್ನ ಹಂಚಿಕೆ ಮಾಡಿದರು. ಅದರಂತೆ ಆನಂದ್​ ಸಿಂಗ್​ಗೆ ಪರಿಸರ ಮತ್ತು ಪ್ರವಾಸೋದ್ಯಮ ಇಲಾಖೆ ಜವಾಬ್ದಾರಿಯನ್ನ ನೀಡಲಾಗಿದೆ. ಇದಕ್ಕೆ ಮಾಧ್ಯಮಗಳ ಮುಂದೆ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಂ ಬೊಮ್ಮಾಯಿ ಮುಂದೆ ನಾನು ಇಂತಹದ್ದೇ ಖಾತೆ ಬೇಕು ಎಂದು ಬೇಡಿಕೆ ಇಟ್ಟಿದ್ದೆ. ಆದರೆ ನನ್ನ ನಿರೀಕ್ಷೆಯ ಖಾತೆಯನ್ನ ಸರ್ಕಾರ ಕೊಟ್ಟಿಲ್ಲ. ಸರ್ಕಾರ ರಚನೆಗೆ ಮೊದಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದೇನೆ. ನನಗೆ ಸರ್ಕಾರದ ಮೇಲೆ ಭರವಸೆ ಇದೆ, ನಿರೀಕ್ಷಿತ ಖಾತೆ ಕೊಡ್ತಾರೆ ಎಂದು. ಸರ್ಕಾರಕ್ಕೆ ನಾನು ಕೂಡ ಮನವಿ ಮಾಡಿದ್ದೇನೆ ಎಂದರು.

ಇಂದು ರಾತ್ರಿ ಬೆಂಗಳೂರಿಗೆ ಹೊರಟಿದ್ದೇನೆ. ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಚರ್ಚೆ ಮಾಡ್ತೀನಿ. ಸರ್ಕಾರ ಯಾವ ರೀತಿ ಸ್ಪಂದಿಸುತ್ತಾ ಅಂತಾ ಕಾದು ನೋಡುತ್ತೇನೆ. ಸ್ಪಂದಿಸದೆ ಇದ್ದರೆ ನನ್ನ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಜವಾಬ್ದಾರಿ..?

Source: newsfirstlive.com Source link