ಬೆಂಗಳೂರಿನ ಶಂಕಿತ ಉಗ್ರರ ಮನೆ ಮೇಲೆ ಎನ್ಐಎ ದಾಳಿ..

ಬೆಂಗಳೂರಿನ ಶಂಕಿತ ಉಗ್ರರ ಮನೆ ಮೇಲೆ ಎನ್ಐಎ ದಾಳಿ..

ಬೆಂಗಳೂರು: ನಗರದ ನಾನಾ ಕಡೆಗಳಲ್ಲಿ ಶಂಕಿತ ಉಗ್ರರ ಮನೆಯ ಮೇಲೆ ಎನ್ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಬೆಂಗಳೂರಿನ 8 ಕಡೆಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಕೆಜಿ ಹಳ್ಳಿ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಈ ವೇಳೆ 8 ಮಂದಿ ಪ್ರಮುಖರು ಎಸ್ಕೇಪ್ ಆಗಿದ್ದರು. ಆ 8 ಜನರು ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ ಅಧಿಕಾರಿಗಳು ಆರೋಪಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ಕೆಜಿ ಹಳ್ಳಿ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಎನ್ಐಎ ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು. ದಾಳಿ  ವೇಳೆ ಕೆಜಿ, ಹಳ್ಳಿ ಡಿಜೆ ಹಳ್ಳಿ ವ್ಯಾಪ್ತಿಯಲ್ಲಿರುವ ಕೆಲ ಆರೋಪಿಗಳ ಮನೆಗಳಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿರುವದಾಗಿ ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

Source: newsfirstlive.com Source link