ಖಾತೆ ಹಂಚಿಕೆಯಲ್ಲಿ ಅಸಮಾಧಾನ ಸ್ಫೋಟ; 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸ್ತೇನೆ ಎಂದ MTB

ಖಾತೆ ಹಂಚಿಕೆಯಲ್ಲಿ ಅಸಮಾಧಾನ ಸ್ಫೋಟ; 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸ್ತೇನೆ ಎಂದ MTB

ಬೆಂಗಳೂರು: ಇಂದು ರಾಜ್ಯ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಆನಂದ್​ಸಿಂಗ್ ಸೇರಿದಂತೆ ಕೆಲವು ಸಚಿವರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಬದಲಾವಣೆ ದೃಷ್ಟಿಯಿಂದ ಹೊಸಬರಿಗೆ ಕೆಲವು ಮಹತ್ವದ ಖಾತೆ -ಬೊಮ್ಮಾಯಿ ಸ್ಪಷ್ಟನೆ

ಟ್ವೀಟ್ ಮೂಲಕ ಎಂಟಿಬಿ ನಾಗರಾಜ್ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದಿದ್ದಾರೆ. ಅಲ್ಲದೇ ತಮ್ಮ ಟ್ವೀಟ್​ನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ಕರ್ನಾಟಕ ಟ್ವಿಟರ್ ಖಾತೆಗಳಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಖಾತೆ ಸಣ್ಣದು-ದೊಡ್ಡದು ಅಂತಾ ಬರಲ್ಲ, ನಿಭಾಯಿಸುವ ವ್ಯಕ್ತಿಯ ಮೇಲೆ ನಿರ್ಧಾರವಾಗುತ್ತೆ -ನೂತನ ಗೃಹ ಸಚಿವ

Source: newsfirstlive.com Source link