ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ವಸತಿ ಸಚಿವ ವಿ.ಸೋಮಣ್ಣ

ರಾಯಚೂರು: ನೂತನ ಸಚಿವರಾದ ಬಳಿಕ ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.

ರಾಯಚೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಸೋಮಣ್ಣ ನಿಗದಿತ ಪ್ರವಾಸ ಯೋಜನೆಯಂತೆ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ವೃಂದಾವನ ದರ್ಶನ ಪಡೆದಿದ್ದಾರೆ. ನೂತನ ಸಚಿವರಾದ ಹಿನ್ನೆಲೆ ಮಂತ್ರಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರವಾಹ ಪರಸ್ಥಿತಿ ಹಾಗೂ ಕೋವಿಡ್ ಮೂರನೇ ಅಲೆ ಮುನ್ನೆಚ್ಚರಿಕೆಗಳ ಕುರಿತು ಇಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸೋಮಣ್ಣ ನಾಳೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಪರಿಹಾರ ಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

Source: publictv.in Source link